ನಾನು ಲಸಿಕೆ ವಿರೋಧಿ ಅಲ್ಲ, ಆದರೆ ಟ್ರೋಫಿಗಳನ್ನ ಬಿಟ್ಟುಕೊಡುತ್ತೇನೆಯೆ ಹೊರತು ವ್ಯಾಕ್ಸಿನ್ ಹಾಕಿಸಿಕೊಳ್ಳುವುದಿಲ್ಲ: ನೊವಾಕ್ ಜಾಕೋವಿಕ್
ಲಸಿಕೆ ಹಾಕಿಸಿಕೊಳ್ಳುವ ವಿಚಾರಕ್ಕೆ ಟೆನಿಸ್ ತಾರೆ ನೊವಾಕ್ ಜೊಕೊವಿಕ್ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
Published: 15th February 2022 03:07 PM | Last Updated: 15th February 2022 06:27 PM | A+A A-

ನೊವಾಕ್ ಜೊಕೊವಿಕ್
ಲಂಡನ್: ಲಸಿಕೆ ಹಾಕಿಸಿಕೊಳ್ಳುವ ವಿಚಾರಕ್ಕೆ ಟೆನಿಸ್ ತಾರೆ ನೊವಾಕ್ ಜೊಕೊವಿಕ್ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಒತ್ತಡಕ್ಕೆ ಪ್ರತಿಕ್ರಿಯಿಸಿದ ಅವರು ಬಲವಂತವಾಗಿ ಲಸಿಕೆ ಹಾಕಕಿಸಿಕೊಳ್ಳಲು ಬಯಸುವುದಿಲ್ಲ ಎಂದು ಹೇಳಿದರು. ಇದಕ್ಕಾಗಿ ಮುಂದೆ ಟೆನಿಸ್ ಟೂರ್ನಿಗಳಿಂದ ದೂರ ಉಳಿಯಲು ಸಿದ್ಧ ಎಂದು ಹೇಳಿದ್ದಾರೆ.
ಆದರೆ ಲಸಿಕೆ ಹಾಕಿಸಿಕೊಳ್ಳುವ ಆಂದೊಲನಕ್ಕೆ ತಾನು ವಿರೋಧಿಸುತ್ತಿಲ್ಲ,ಬದಲಿಗೆ ವೈಯಕ್ತಿಕ ಸ್ವಾತಂತ್ರ್ಯವನ್ನು ಬೆಂಬಲಿಸುತ್ತಿದ್ದೇನೆ ಎಂದು ಜೊಕೊವಿಕ್ ಹೇಳಿದ್ದಾರೆ. ಹಾಗಾದರೆ ಈ ವರ್ಷ ವಿಂಬಲ್ಡನ್ ಮತ್ತು ಫ್ರೆಂಚ್ ಓಪನ್ ಗ್ರ್ಯಾನ್ ಸ್ಲಾಮ್ ಪಂದ್ಯಾವಳಿಗಳನ್ನು ಕಳೆದುಕೊಳ್ಳಲು ಸಿದ್ದರಿದ್ದೀರ ಎಂಬ ಪ್ರಶ್ನೆಗೆ ಉತ್ತರಿಸಿದ ಜೋಕೊ, ನಾನು ಬೆಲೆ ತೆರಲು ಸಿದ್ಧ ಎಂದು ಹೇಳಿದರು.
ನಾನು ನನ್ನ ದೈಹಿಕ ಸಾಮರ್ಥ್ಯಕ್ಕೆ ಅನುಗುಣವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದನೇ ಎಂದು ಅವರು ಹೇಳಿದರು, ಇದರ ಮುಂದೆ ಟ್ರೋಫಿಗಳನ್ನು ಬಿಟ್ಟುಕೊಡುವುದು ದೊಡ್ಡ ವಿಷಯವಲ್ಲ ಎಂದು ಜೋಕೊ ಹೇಳಿದರು.
ನಾನು ಬಾಲ್ಯದಲ್ಲಿ ಲಸಿಕೆ ಹಾಕಿಸಿಕೊಂಡಿದ್ಧೇನೆ ಮತ್ತು ವ್ಯಾಕ್ಸಿನೇಷನ್ ಪ್ರಕ್ರಿಯೆಯನ್ನು ವಿರೋಧಿಸುವುದಿಲ್ಲ ಎಂದು ಹೇಳಿದರು, ದೇಹಕ್ಕೆ ಏನು ತೆಗೆದುಕೊಳ್ಳಲಾಗುತ್ತದೆ ಎಂಬುದರ ಮೇಲೆ ವೈಯಕ್ತಿಕ ಸ್ವಾತಂತ್ರ್ಯ ಇರಬೇಕು ಎಂದು ಅವರು ಹೇಳಿದರು. ಈ ಹಿಂದೆ ಮೆಲ್ಬೋರ್ನ್‌ನಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್‌ನಲ್ಲಿ ಕೋವಿಡ್‌ಗೆ ಲಸಿಕೆ ಹಾಕಿಸಿಕೊಳ್ಳದ ಕಾರಣ ಆಟದಿಂದ ದೂರವಿರಬೇಕಾಗಿ ಬಂದಿತ್ತು.