ವಿಶ್ವ ಅಥ್ಸೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಜಾವೆಲಿನ್ ಪಟು ನೀರಜ್ ಚೋಪ್ರಾ ಬೆಳ್ಳಿ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ಕನೇ ಸುತ್ತಿನಲ್ಲಿ ನೀರಜ್ ಚೋಪ್ರಾ 88.13 ಮೀಟರ್ ದೂರ ಎಸೆಯುವ ಮೂಲಕ ರಜತ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನೀರಜ್ ಚೋಪ್ರಾ
ನೀರಜ್ ಚೋಪ್ರಾ

ಯುಜೀನ್‌: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಜಾವೆಲಿನ್ ಪಟು ನೀರಜ್ ಚೋಪ್ರಾ ಬೆಳ್ಳಿ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ಕನೇ ಸುತ್ತಿನಲ್ಲಿ ನೀರಜ್ ಚೋಪ್ರಾ 88.13 ಮೀಟರ್ ದೂರ ಎಸೆಯುವ ಮೂಲಕ ರಜತ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನೀರಜ್ ಗೆ ಪ್ರಬಲ ಸ್ಪರ್ಧೆ ನೀಡಿದ ಆ್ಯಂಡರ್ಸನ್ ಪೀಟರ್ ಮೂರು ಬಾರಿ 90 ಮೀಟರ್ ಗಿಂತ ಹೆಚ್ಚು ಎಸೆದು ಬಂಗಾರದ ಪದಕ ಪಡೆದರು. ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ರಜತ ಪದಕಕ್ಕೆ ತೃಪ್ತಿ ಪಟ್ಟರು.

ಯುಜೀನ್‌ನಲ್ಲಿ ನಡೆದ ಜಾವೆಲಿನ್ ಥ್ರೋ ಫೈನಲ್‌ನ ಮೊದಲ ಪ್ರಯತ್ನದಲ್ಲಿ ಪೌಲ್‌ ಮಾಡಿದರು. ಇನ್ನು ನೀರಜ್ ಚೋಪ್ರಾ ತಮ್ಮ ಪಾಲಿನ ಎರಡನೇ ಪ್ರಯತ್ನದಲ್ಲಿ 82.39 ಮೀಟರ್ ದೂರ ಜಾವೆಲಿನ್ ಎಸೆದರು. ಮೂರನೇ ಸುತ್ತಿನಲ್ಲಿ ನೀರಜ್ ಚೋಪ್ರಾ 86.37 ಮೀಟರ್ ದೂರ ಜಾವೆಲಿನ್ ಎಸೆದರು. ಈ ಮೂಲಕ ಮೂರನೇ ಸುತ್ತಿನ ಅಂತ್ಯದ ವೇಳೆಗೆ ನೀರಜ್ ಚೋಪ್ರಾ 4ನೇ ಸ್ಥಾನ ಪಡೆದರು. ಆದರೆ ನಾಲ್ಕನೇ ಸುತ್ತಿನಲ್ಲಿ ನೀರಜ್ ಚೋಪ್ರಾ 88.13 ಮೀಟರ್ ದೂರ ಎಸೆಯುವ ಮೂಲಕ ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com