ನೀರಜ್ ಚೋಪ್ರಾ
ಕ್ರೀಡೆ
ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್: ಐತಿಹಾಸಿಕ ಬೆಳ್ಳಿ ಪದಕ ಗೆದ್ದ ನಂತರ ನೀರಜ್ ಚೋಪ್ರಾ ಪ್ರತಿಕ್ರಿಯೆ ಹೀಗಿದೆ...
ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದಿರುವ ನೀರಜ್ ಚೋಪ್ರಾ, ತಮ್ಮ ಪ್ರದರ್ಶನ ತೃಪ್ತಿದಾಯಕವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಯೂಜೀನ್: ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದಿರುವ ನೀರಜ್ ಚೋಪ್ರಾ, ತಮ್ಮ ಪ್ರದರ್ಶನ ತೃಪ್ತಿದಾಯಕವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಜಾವೆಲಿನ್ ಎಸೆಯಲು ಉತ್ತಮ ಪರಿಸ್ಥಿತಿ ಇರಲಿಲ್ಲ. ಗಾಳಿಯ ವೇಗವೂ ಹೆಚ್ಚಾಗಿದ್ದರೂ ಉತ್ತಮ ಪ್ರದರ್ಶನ ನೀಡುತ್ತೇನೆಂಬ ವಿಶ್ವಾಸವಿತ್ತು. ನನ್ನ ಫಲಿತಾಂಶ ತೃಪ್ತಿದಾಯಕವಾಗಿದ್ದು, ದೇಶಕ್ಕಾಗಿ ಪದಕ ಗೆಲ್ಲಲು ಸಾಧ್ಯವಾಗಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.
ಸ್ಪರ್ಧೆ ಕಠಿಣ ಹಾಗೂ ಸವಾಲಿನಿಂದ ಕೂಡಿತ್ತು. ಪ್ರತಿಸ್ಪರ್ಧಿಗಳು ಉತ್ತಮವಾಗಿ ಎಸೆಯುತ್ತಿದ್ದರು. ಇಂದಿನ ಸ್ಪರ್ಧೆಯಿಂದ ನಾನು ಸಾಕಷ್ಟು ವಿಚಾರಗಳನ್ನು ಕಲಿತುಕೊಂಡಿದ್ದೇನೆ. ಚಿನ್ನ ಗೆಲ್ಲಬೇಕೆಂಬ ಹಂಬಲ ಮುಂದುವರಿಯಲಿದೆ. ಪ್ರತಿ ಸಲವೂ ಚಿನ್ನ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ನಂಬಬೇಕು. ನನ್ನಿಂದ ಸಾಧ್ಯವಾಗುವ ಎಲ್ಲವನ್ನೂ ಮಾಡುತ್ತೇನೆ. ತರಬೇತಿ ಮೇಲೆ ಗಮನ ಕೇಂದ್ರಿಕರಿಸುತ್ತೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ