ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಶರತ್ ಕಮಲ್ ಅಚಂತ್ ಆಯ್ಕೆ, 25 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿ
ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಗಾಗಿ ಭಾರತ ಸರ್ಕಾರ ನೀಡುವ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಟೆಬಲ್ ಟೆನಿಸ್ ಆಟಗಾರ ಶರತ್ ಕಮಲ್ ಅಚಂತ್ ಆಯ್ಕೆಯಾಗಿದ್ದಾರೆ.
Published: 14th November 2022 08:58 PM | Last Updated: 14th November 2022 08:58 PM | A+A A-

ಶರತ್ ಕಮಲ್ ಅಚಂತ್
ನವದೆಹಲಿ: ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಗಾಗಿ ಭಾರತ ಸರ್ಕಾರ ನೀಡುವ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಟೆಬಲ್ ಟೆನಿಸ್ ಆಟಗಾರ ಶರತ್ ಕಮಲ್ ಅಚಂತ್ ಆಯ್ಕೆಯಾಗಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವೆಂಬರ್ 30ರಂದು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ನೀಡಲಿದ್ದಾರೆ. ಕ್ರೀಡೆಯಲ್ಲಿನ ಅತ್ಯುತ್ತಮ ಸಾಧನೆಗಾಗಿ 25 ಕ್ರೀಡಾಪಟುಗಳು ಅರ್ಜುನ ಪ್ರಶಸ್ತಿಗಳನ್ನು ಸ್ವೀಕರಿಸಲಿದ್ದಾರೆ ಎಂದು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ತಿಳಿಸಿದೆ.
ಚೆಸ್ ಆಟಗಾರ ಆರ್ ಪ್ರಜ್ಞಾನಂದ. ಒಡಿಶಾ ಹಾಕಿ ತಾರೆ ದೀಪ್ ಗ್ರೇಸ್ ಎಕ್ಕಾ. ಶಟ್ಲರ್‌ಗಳಾದ ಲಕ್ಷ್ಯ ಸೇನ್, ಎಚ್‌ಎಸ್ ಪ್ರಣಯ್, ಮಹಿಳಾ ಬಾಕ್ಸರ್ ನಿಖತ್ ಜರೀನ್, ಅಥ್ಲೀಟ್‌ಗಳಾದ ಎಲ್ದೋಸ್ ಪಾಲ್, ಅವಿನಾಶ್ ಸೇಬಲ್ ಸೇರಿದಂತೆ ಒಟ್ಟು 25 ಕ್ರೀಡಾಪಟುಗಳು ಈ ವರ್ಷ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.
ಆದರೆ ಈ ಬಾರಿ ಯಾವುದೇ ಕ್ರಿಕೆಟಿಗರು ಅರ್ಜುನ ಪ್ರಶಸ್ತಿಗೆ ಆಯ್ಕೆಯಾಗಿಲ್ಲ.