ರಾಷ್ಟ್ರೀಯ ಕ್ರೀಡಾಕೂಟ 2022: ಗಾಯದ ಹೊರತಾಗಿಯೂ ವೇಟ್‌ಲಿಫ್ಟಿಂಗ್‌ನಲ್ಲಿ ಚಿನ್ನ ಗೆದ್ದ ಮೀರಾಬಾಯಿ ಚಾನು!

ಟೋಕಿಯೊ ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನು ಶುಕ್ರವಾರ ಗಾಂಧಿನಗರದಲ್ಲಿ ನಡೆಯುತ್ತಿರುವ 36 ನೇ ರಾಷ್ಟ್ರೀಯ ಕ್ರೀಡಾಕೂಟದ ಮಹಿಳೆಯರ ವೇಟ್‌ಲಿಫ್ಟಿಂಗ್ 49 ಕೆಜಿ ವಿಭಾಗದಲ್ಲಿ 191 ಕೆಜಿ ಎತ್ತುವ ಮೂಲಕ ಚಿನ್ನದ ಪದಕ ಗೆದ್ದರು.
ಮೀರಾಬಾಯಿ ಚಾನು
ಮೀರಾಬಾಯಿ ಚಾನು

ಗಾಂಧಿನಗರ: ಟೋಕಿಯೊ ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನು ಶುಕ್ರವಾರ ಗಾಂಧಿನಗರದಲ್ಲಿ ನಡೆಯುತ್ತಿರುವ 36 ನೇ ರಾಷ್ಟ್ರೀಯ ಕ್ರೀಡಾಕೂಟದ ಮಹಿಳೆಯರ ವೇಟ್‌ಲಿಫ್ಟಿಂಗ್ 49 ಕೆಜಿ ವಿಭಾಗದಲ್ಲಿ 191 ಕೆಜಿ ಎತ್ತುವ ಮೂಲಕ ಚಿನ್ನದ ಪದಕ ಗೆದ್ದರು.

ಆಗಸ್ಟ್‌ನಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದ ಮೀರಾಬಾಯಿ, ಸ್ನ್ಯಾಚ್‌ನಲ್ಲಿ 84 ಕೆಜಿ ಮತ್ತು ಕ್ಲೀನ್ ಮತ್ತು ಜರ್ಕ್‌ನಲ್ಲಿ 107 ಕೆಜಿ ಎತ್ತುವ ಮೂಲಕ ಪ್ರಶಸ್ತಿ ಗೆದ್ದಿದ್ದರು.

ತನ್ನ ಎರಡನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಮೀರಾಬಾಯಿ, ತನಗೆ ಎಡ ಮಣಿಕಟ್ಟಿನ ಗಾಯವಾಗಿದೆ ಎಂದು ಬಹಿರಂಗಪಡಿಸಿದರು. ಇತ್ತೀಚೆಗೆ ಎನ್‌ಐಎಸ್ ಪಟಿಯಾಲಾದಲ್ಲಿ ತರಬೇತಿಯ ಸಮಯದಲ್ಲಿ, ನನ್ನ ಎಡ ಮಣಿಕಟ್ಟಿಗೆ ಗಾಯವಾಯಿತು. ನಂತರ ನಾನು ಹೆಚ್ಚು ಅಪಾಯವನ್ನು ತೆಗೆದುಕೊಳ್ಳದಂತೆ ನೋಡಿಕೊಂಡೆ. ಡಿಸೆಂಬರ್‌ನಲ್ಲಿ ವಿಶ್ವ ಚಾಂಪಿಯನ್‌ಶಿಪ್ ಕೂಡ ನಡೆಯಲಿದೆ ಎಂದರು.

ಚಿನ್ನದ ಪದಕ ಗೆದ್ದ ದಿವ್ಯಾ ಕಕ್ರನ್
ಅರ್ಜುನ್ ಪ್ರಶಸ್ತಿ ಪುರಸ್ಕೃತ ಕುಸ್ತಿಪಟು ದಿವ್ಯಾ ಕಾಕ್ರನ್ ತನ್ನ ಜಿಲ್ಲೆ ಮುಜಾಫರ್‌ನಗರಕ್ಕೆ ಮತ್ತೊಮ್ಮೆ ಪ್ರಶಸ್ತಿಗಳನ್ನು ತಂದಿದ್ದಾರೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ದಿವ್ಯಾ ಅವರು ಮಹಿಳೆಯರ 76 ಕೆಜಿ ತೂಕ ವಿಭಾಗದಲ್ಲಿ ಹಿಮಾಚಲ ಪ್ರದೇಶದ ಕುಸ್ತಿಪಟು ರಾಣಿ ಅವರನ್ನು ಸೋಲಿಸಿ ಚಿನ್ನದ ಪದಕ ಗೆದ್ದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com