ಚೆನ್ನೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಅವರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ 2013ರಲ್ಲಿ ಐಪಿಎಲ್ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ದಂಧೆಯನ್ನು ಬಯಲಿಗೆಳೆದಿದ್ದ ತಮಿಳುನಾಡಿನ ನಿವೃತ್ತ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ಅವರಿಗೆ ಮದ್ರಾಸ್ ಹೈಕೋರ್ಟ್ ಶುಕ್ರವಾರ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ.
ನ್ಯಾಯಮೂರ್ತಿಗಳಾದ ಎಸ್.ಎಸ್. ಸುಂದರ್ ಮತ್ತು ಸುಂದರ್ ಮೋಹನ್ ಅವರಿದ್ದ ವಿಭಾಗೀಯ ಪೀಠ ಶುಕ್ರವಾರ ಈ ಆದೇಶ ನೀಡಿದೆ. ಅಲ್ಲದೆ, ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಅಧಿಕಾರಿಗೆ ಅವಕಾಶ ನೀಡಲು ಪೀಠವು ಶಿಕ್ಷೆ ವಿಧಿಸುವುದನ್ನು 30 ದಿನಗಳವರೆಗೆ ತಡೆಹಿಡಿದಿದೆ.
ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಐಪಿಎಸ್ ಅಧಿಕಾರಿ ವಿರುದ್ಧ ಕ್ರಿಕೆಟಿಗ ಧೋನಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರು.
2014ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಬೆಟ್ಟಿಂಗ್ ದಂಧೆಯಲ್ಲಿ ತಮ್ಮನ್ನು ಹೆಸರಿಸಿದ್ದಕ್ಕಾಗಿ 100 ಕೋಟಿ ರೂ. ನಷ್ಟ ಪರಿಹಾರ ಕೋರಿ ಧೋನಿ ಅವರು ಮಾನನಷ್ಟ ಮೊಕದ್ದಮೆ ಸಲ್ಲಿಸಿದ್ದರು. ಇದಕ್ಕೆ ಪ್ರತಿಯಾಗಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ನ್ಯಾಯಾಂಗದ ವಿರುದ್ಧ ಅವರು ಮಾಡಿದ ಟೀಕೆಗಳಿಗಾಗಿ ಸಂಪತ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಧೋನಿ ಕೋರಿದ್ದರು.
Advertisement