WFI ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಆಪ್ತನ ಆಯ್ಕೆ ವಿರೋಧಿಸಿ ಪದ್ಮಶ್ರೀ ಹಿಂದಿರುಗಿಸಿದ ಮತ್ತೊಬ್ಬ ಕುಸ್ತಿಪಟು

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ(ಡಬ್ಲ್ಯುಎಫ್‌ಐ)ದ ಅಧ್ಯಕ್ಷರಾಗಿ...
ಪದ್ಮಶ್ರೀ ಸ್ವೀಕರಿಸುತ್ತಿರುವ ವೀರೇಂದ್ರ ಸಿಂಗ್ ಯಾದವ್
ಪದ್ಮಶ್ರೀ ಸ್ವೀಕರಿಸುತ್ತಿರುವ ವೀರೇಂದ್ರ ಸಿಂಗ್ ಯಾದವ್
Updated on

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ(ಡಬ್ಲ್ಯುಎಫ್‌ಐ)ದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದನ್ನು ವಿರೋಧಿಸಿ ರಿಯೊ ಒಲಿಂಪಿಕ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರು ಕುಸ್ತಿಗೆ ವಿದಾಯ ಹೇಳಿದ್ದು, ಅವರನ್ನು ಬೆಂಬಲಿಸಿ ಹಲವು ಕುಸ್ತಿ ಪಟುಗಳು ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದಾರೆ.

ನಿನ್ನೆಯಷ್ಟೇ ಕುಸ್ತಿ ಪಟು ಬಜರಂಗ್ ಪೂನಿಯಾ ಅವರು ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ. ಇದರ ಬೆನ್ನಲ್ಲೇ ಇಂದು ಮತ್ತೊಬ್ಬ ಕುಸ್ತಿಪಟು, ಡೆಫ್ಲಿಂಪಿಕ್ಸ್ ಚಿನ್ನದ ಪದಕ ವಿಜೇತ ವೀರೇಂದ್ರ ಸಿಂಗ್ ಯಾದವ್ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಸರ್ಕಾರಕ್ಕೆ ಹಿಂದಿರುಗಿಸುವುದಾಗಿ ಹೇಳಿದ್ದಾರೆ.

"ನನ್ನ ಸಹೋದರಿ ಮತ್ತು ದೇಶದ ಮಗಳಿಗಾಗಿ ನಾನು ಪದ್ಮಶ್ರೀಯನ್ನು ಹಿಂದಿರುಗಿಸುತ್ತೇನೆ. ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಜೀ, ನಿಮ್ಮ ಮಗಳು ಮತ್ತು ನನ್ನ ಸಹೋದರಿ ಸಾಕ್ಷಿ ಮಲಿಕ್ ಅವರ ಬಗ್ಗೆ ನನಗೆ ಹೆಮ್ಮೆ ಇದೆ" ಎಂದು ವೀರೇಂದ್ರ ಸಿಂಗ್ ಯಾದವ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಲ್ಲದೆ ದೇಶದ ಅಪ್ರತಿಮ ಕ್ರೀಡಾಪಟುಗಳಾದ ಸಚಿನ್ ತೆಂಡೂಲ್ಕರ್ ಮತ್ತು ನೀರಜ್ ಚೋಪ್ರಾ ಅವರು ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕು ಎಂದು ವೀರೇಂದ್ರ ಸಿಂಗ್ ಯಾದವ್ ಅವರು ಒತ್ತಾಯಿಸಿದ್ದಾರೆ.

"ದೇಶದ ಅಗ್ರ ಆಟಗಾರರು ತಮ್ಮ ನಿರ್ಧಾರವನ್ನು ಪ್ರಕಟಿಸುವಂತೆ ನಾನು ವಿನಂತಿಸುತ್ತೇನೆ" ಎಂದು ವೀರೇಂದ್ರ ಅವರು ತಮ್ಮ ಪೋಸ್ಟ್‌ನಲ್ಲಿ ಕ್ರಿಕೆಟ್ ದಂತಕಥೆ ತೆಂಡೂಲ್ಕರ್ ಮತ್ತು ಒಲಿಂಪಿಕ್ ಚಾಂಪಿಯನ್ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ ಅವರನ್ನು ಟ್ಯಾಗ್ ಮಾಡಿದ್ದಾರೆ.

ವೀರೇಂದ್ರ ಅವರು 2021 ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀಯನ್ನು ಸ್ವೀಕರಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com