ಆಟಗಾರ್ತಿ ಸಾಲಿಯತ್
ಆಟಗಾರ್ತಿ ಸಾಲಿಯತ್

ಬೆಳ್ತಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ!

ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿನಿ ಸಾಲಿಯತ್ (24) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ.
Published on

ಬೆಳ್ತಂಗಡಿ : ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿನಿ ಸಾಲಿಯತ್ (24) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ.

ಬೆಳ್ತಂಗಡಿ ತಾಲೂಕಿನ ಸಾಲಿಯತ್ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿದ್ದರು. ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಆದಂ ಮತ್ತು ಹವ್ವಮ್ಮ ದಂಪತಿಯ ಪುತ್ರಿಯಾಗಿರುವ ಸಾಲಿಯತ್ ಒಂದು ವರ್ಷದ ಹಿಂದೆ ವಿವಾಹಿತರಾಗಿದ್ದು, ಸದ್ಯ ಚಿಕ್ಕಮಗಳೂರಿನಲ್ಲಿರುವ ಪತಿ ಮನೆಯಲ್ಲಿದ್ದರು. ಎದೆ ನೋವಿನ ಕಾರಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ ಅವರು ಮೃತಪಟ್ಟಿದ್ದು, ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಪಡಂಗಡಿಯಲ್ಲಿ ಪ್ರಾಥಮಿಕ, ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆ ಉಜಿರೆಯಲ್ಲಿ 9ನೇ ತರಗತಿ, ಮುಂಡಾಜೆಯಲ್ಲಿ 10 ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ, ಉಜಿರೆ ಎಸ್.ಡಿ.ಎಂ.ನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆದಿದ್ದ ಸಾಲಿಯತ್, ಕ್ರೀಡಾ ಕ್ಷೇತ್ರದಲ್ಲಿ ಅತ್ಯಧಿಕ ಸಾಧನೆ ತೋರಿದ್ದರು.

ಹೈದರ್ ಪಡಂಗಡಿ ಅವರ ಗರಡಿಯಲ್ಲಿ ಆರಂಭದ ತರಬೇತಿ ಪಡೆದಿದ್ದ ಇವರು, ಮುಂದೆ ಪ್ರೌಢ ಶಿಕ್ಷಣವನ್ನು ಮುಂಡಾಜೆ ಶಿಕ್ಷಣ ಸಂಸ್ಥೆಯಲ್ಲಿ ಪಡೆಯುತ್ತಿದ್ದ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಗುಣಪಾಲ್ ಎಂ.ಎಸ್. ಅವರ ಗರಡಿಯಲ್ಲಿ ಪಳಗಿದರು.

ವಾಲಿಬಾಲ್ ಆಟದಲ್ಲಿ ಅತ್ಯಂತ ಉತ್ಕೃಷ್ಟ ಪ್ರದರ್ಶನ ನೀಡಿ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡ  ದ್ವಿತೀಯ ಸ್ಥಾನ ಗಳಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು.

ಮುಂದೆ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣವನ್ನು ಎಸ್.ಡಿ.ಎಂ. ಕಾಲೇಜು ಉಜಿರೆಯಲ್ಲಿ ಮಾಡುತ್ತಿದ್ದ ಸಂದರ್ಭದಲ್ಲಿ ಕರ್ನಾಟಕ ರಾಜ್ಯಕ್ಕೆ ಬಹುಬೇಡಿಕೆಯ ವಾಲಿಬಾಲ್ ಆಟಗಾರ್ತಿಯಾಗಿ ಜನಮನ್ನಣೆಗಳಿಸಿದ್ದರು.

ರಾಷ್ಟ್ರದ ವಾಲಿಬಾಲ್ ನಲ್ಲಿ ಬೆಳ್ಳಿ ಪದಕ, ಸೀನಿಯರ್ ನ್ಯಾಶನಲ್ ದಕ್ಷಿಣ ವಲಯದಲ್ಲಿ ಚಿನ್ನದ ಪದಕ, ಜ್ಯೂನಿಯರ್ ನ್ಯಾಷನಲ್ ನಲ್ಲಿ ತೃತೀಯ ಸ್ಥಾನ ಗಳಿಸಿರುವುದು ಇವರ ಹಿರಿಮೆಯನ್ನು ಹೆಚ್ಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com