ಏಷ್ಯನ್ ಗೇಮ್ಸ್: ಚಿನ್ನ ಗೆದ್ದು ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಹಾಕಿ ತಂಡ

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಶುಕ್ರವಾರ ನಡೆದ ಪುರುಷರ ಹಾಕಿ ಫೈನಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಜಪಾನ್ ವಿರುದ್ಧ ಭಾರತ 5-1...
ಭಾರತದ ಹಾಕಿ ತಂಡ
ಭಾರತದ ಹಾಕಿ ತಂಡ
Updated on

ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಶುಕ್ರವಾರ ನಡೆದ ಪುರುಷರ ಹಾಕಿ ಫೈನಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಜಪಾನ್ ವಿರುದ್ಧ ಭಾರತ 5-1 ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ.

ಮನ್‌ಪ್ರೀತ್ ಸಿಂಗ್ ಬಾರಿಸಿದ ಗೋಲಿನ ನೆರವಿನಿಂದ ಭಾರತ ವಿರಾಮದ ವೇಳೆಗೆ 1-0 ಮುನ್ನಡೆ ಸಾಧಿಸಿತ್ತು. ನಂತರ ನಾಯಕ ಹರ್ಮನ್‌ಪ್ರೀತ್ ಸಿಂಗ್, ಅಮಿತ್ ರೋಹಿತ್ ದಾಸ್ ಮತ್ತು ಅಭಿಷೇಕ್ ಗೋಲು ಗಳಿಸುವ ಮೂಲಕ ಜಪಾನ್‌ ತಂಡವನ್ನು ಮಣಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

ಭಾರತದ ಹಾಕಿ ತಂಡ ಗೆಲುವಿನೊಂದಿಗೆ 2024ರಲ್ಲಿ ನಡೆಯಲ್ಲಿರುವ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದುಕೊಂಡಿದೆ.

1966, 1998 ಮತ್ತು 2014ರಲ್ಲಿ ನಡೆದ ಏಷ್ಯನ್ ಗೇಮ್ಸ್ ನಲ್ಲಿ ಚಿನ್ನ ಗೆದ್ದಿದ್ದ ಭಾರತ ಈಗ ನಾಲ್ಕನೇ ಬಾರಿ ಏಷ್ಯನ್ ಗೇಮ್ಸ್ ಚಿನ್ನವನ್ನು ತನ್ನದಾಗಿಸಿಕೊಂಡಿದೆ.

ಏಷ್ಯನ್ ಗೇಮ್ಸ್ ನಲ್ಲಿ ಭಾರತ ಇಂದು 22ನೇ ಚಿನ್ನದ ಪದಕ ಗೆದ್ದಿದ್ದು, ಇದರೊಂದಿಗೆ ದೇಶದ ಒಟ್ಟು ಪದಕಗಳ ಸಂಖ್ಯೆ 95ಕ್ಕೆ ಏರಿಕೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com