ಏಷ್ಯನ್ ಗೇಮ್ಸ್​ 2023: ಬಾಂಗ್ಲಾದೇಶದ ವಿರುದ್ಧ 8 ವಿಕೆಟ್​ ಜಯ, ಭಾರತ ಮಹಿಳಾ ಕ್ರಿಕೆಟ್ ತಂಡ ಫೈನಲ್​ಗೆ ಲಗ್ಗೆ

ಚೀನಾದ ಹ್ಯಾಂಗ್‌ಝೌನಲ್ಲಿ ಆಯೋಜಿಸಿರುವ ಏಷ್ಯನ್ ಗೇಮ್ಸ್ 2023ರ ಮಹಿಳಾ ಟಿ20 ಯಲ್ಲಿ ಭಾರತ ಕ್ರಿಕೆಟ್ ತಂಡ ಫೈನಲ್​ಗೆ ಪ್ರವೇಶಿಸಿದೆ.
ಶಫಾಲಿ ವರ್ಮಾ
ಶಫಾಲಿ ವರ್ಮಾ

ಹ್ಯಾಂಗ್ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ಆಯೋಜಿಸಿರುವ ಏಷ್ಯನ್ ಗೇಮ್ಸ್ 2023ರ ಮಹಿಳಾ ಟಿ20 ಯಲ್ಲಿ ಭಾರತ ಕ್ರಿಕೆಟ್ ತಂಡ ಫೈನಲ್​ಗೆ ಪ್ರವೇಶಿಸಿದೆ.

ಪಿಂಗ್​ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್​ನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಸ್ಮೃತಿ ಮಂದಾನ ನಾಯಕತ್ವದ ಭಾರತ ಮಹಿಳಾ ತಂಡ 8 ವಿಕೆಟ್​ಗಳ ಜಯ ಸಾಧಿಸಿ ಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ.

ಈ ಮೂಲಕ ಪದಕವನ್ನು ಖಚಿತ ಪಡಿಸಿದೆ. ಫೈನಲ್​ನಲ್ಲಿ ಭಾರತ ತಂಡ ಪಾಕಿಸ್ತಾನ ಅಥವಾ ಶ್ರೀಲಂಕಾವನ್ನು ಎದುರಿಸಲಿದೆ.

ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ಮಹಿಳಾ ತಂಡ ಭಾರತದ ಬೌಲಿಂಗ್ ಬಿರುಗಾಳಿಗೆ ತತ್ತರಿಸಿ ಹೋಯಿತು. ಮೊದಲ ಓವರ್​ನಲ್ಲೇ ಎರಡು ವಿಕೆಟ್ ಕಳೆದುಕೊಂಡು ಬಾಂಗ್ಲಾ ಕೇವಲ 51 ರನ್​ಗಳಿಗೆ ಆಲೌಟ್ ಆಯಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶಕ್ಕೆ ಪೂಜಾ ವಸ್ತ್ರಾಕರ್ ಆರಂಭದಲ್ಲೇ ಶಾಕ್ ನೀಡಿದರು.

ಪೂಜಾ ತಮ್ಮ ಮೊದಲ ಓವರ್​​ನ ಮೊದಲ ಎಸೆತದಲ್ಲೇ ಶಾಥಿ ರಾಣಿಯನ್ನು ಔಟ್ ಮಾಡಿದರೆ, 5ನೇ ಎಸೆತದಲ್ಲಿ ಶಮೀಮಾ ಸುಲ್ತಾನ ಎಲ್​ಬಿ ಬಲೆಗೆ ಬಿದ್ದು ಶೂನ್ಯಕ್ಕೆ ಪೆವಿಲಿಯನ್ ಸೇರಿಕೊಂಡರು. ಬಳಿಕ ಸೋಭಾನಾ ಮೊಸ್ತರಿ 8 ರನ್ ಗಳಿಸಿ ನಿರ್ಗಮಿಸಿದರು.

8 ವಿಕೆಟ್​ಗಳ ಅಮೋಘ ಗೆಲುವಿನ ಮೂಲಕ ಭಾರತ ಮಹಿಳಾ ಕ್ರಿಕೆಟ್ ತಂಡ ಏಷ್ಯನ್ ಗೇಮ್ಸ್ 2023 ರಲ್ಲಿ ಫೈನಲ್​ಗೆ ಲಗ್ಗೆಯಿಟ್ಟಿದೆ. ಫೈನಲ್ ಪಂದ್ಯವನ್ನು ಸೋಮವಾರ ಏರ್ಪಡಿಸಲಾಗಿದೆ.

ಎರಡನೇ ಸೆಮಿ ಫೈನಲ್​ನಲ್ಲಿ ಪಾಕಿಸ್ತಾನ-ಶ್ರೀಲಂಕಾ ಮುಖಾಮುಖಿ ಆಗಲಿದ್ದು, ಇಲ್ಲಿ ಗೆದ್ದ ತಂಡದ ಜೊತೆ ಭಾರತ ಫೈನಲ್​ನಲ್ಲಿ ಚಿನ್ನಕ್ಕೆ ಹೋರಾಡಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com