ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಚಿನ್ನ ಗೆದ್ದು ಹೊಸ ಇತಿಹಾಸ ಸೃಷ್ಟಿಸಿದ ನೀರಜ್ ಚೋಪ್ರಾ
ಹಂಗೇರಿಯ ಬುಡಾಪೆಸ್ಟ್‌ನಲ್ಲಿ ಭಾನುವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023 ರಲ್ಲಿ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
Published: 28th August 2023 01:22 AM | Last Updated: 28th August 2023 08:57 PM | A+A A-

ನೀರಜ್ ಚೋಪ್ರಾ
ಬುಡಾಪೆಸ್ಟ್: ಹಂಗೇರಿಯ ಬುಡಾಪೆಸ್ಟ್‌ನಲ್ಲಿ ಭಾನುವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023 ರಲ್ಲಿ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
ಇಂದು ನಡೆದ ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಅವರು 88.17 ಮೀಟರ್ ದೂರ ಭರ್ಜಿ ಎಸೆಯುವ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ದಾಖಲೆ ನಿರ್ಮಿಸಿದ್ದಾರೆ.
ಮೊದಲ ಸುತ್ತಿನಲ್ಲೇ ಫೌಲ್ ಮಾಡಿದ್ದ ನೀರಜ್ ಚೋಪ್ರಾ, 2ನೇ ಸುತ್ತಿನಲ್ಲಿ 88.17 ಮೀಟರ್ ದೂರಕ್ಕೆ ಎಸೆಯುವ ಮೂಲಕ ಅಗ್ರಸ್ಥಾನದೊಂದಿಗೆ ಚಿನ್ನದ ಪದಕಕ್ಕೆ ಕೊರೊಳೊಡ್ಡಿದರು.
ಇದನ್ನು ಓದಿ: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ನೀರಜ್ ಚೋಪ್ರಾ
ಪಾಕಿಸ್ತಾನದ ಅರ್ಷದ್ ನದೀಮ್ ಅವರು 87.82 ಮೀಟರ್ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದಿದ್ದಾರೆ.
ಶುಕ್ರವಾರ ನಡೆದ ಜಾವೆಲಿನ್ ಥ್ರೋ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಅವರು ಮೊದಲ ಪ್ರತಯತ್ನದಲ್ಲೇ 88.77 ಮೀಟರ್ ಎಸೆಯುವ ಮೂಲಕ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ತಮ್ಮ ಅಭಿಯಾನ ಆರಂಭಿಸಿದ್ದರು.