ಪುರುಷರ ಹಾಕಿ ವಿಶ್ವಕಪ್: ಭಾರತದ ಕನಸು ಭಗ್ನ, ನ್ಯೂಜಿಲೆಂಡ್ ವಿರುದ್ಧ ಸೋತು ಟೂರ್ನಿಯಿಂದ ಔಟ್
ಒಡಿಶಾದ ಭುವನೇಶ್ವರದಲ್ಲಿ ಭಾನುವಾರ ನಡೆದ ಪುರುಷರ ಹಾಕಿ ವಿಶ್ವಕಪ್ ಪಂದ್ಯಾವಳಿ ಕ್ರಾಸ್ ಓವರ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ಭಾರತೀಯ ತಂಡ ಟೂರ್ನಿಯಿಂದ ಹೊರ ಬಿದ್ದಿದೆ. ಇದರೊಂದಿಗೆ 48 ವರ್ಷಗಳ ನಂತರ ವಿಶ್ವಕಪ್ ಗೆಲ್ಲುವ ಕನಸು ಭಗ್ನಗೊಂಡಿತು
Published: 22nd January 2023 10:46 PM | Last Updated: 22nd January 2023 10:49 PM | A+A A-

ಭಾರತೀಯ ಹಾಕಿ ತಂಡ
ಭುವನೇಶ್ವರ: ಒಡಿಶಾದ ಭುವನೇಶ್ವರದಲ್ಲಿ ಭಾನುವಾರ ನಡೆದ ಪುರುಷರ ಹಾಕಿ ವಿಶ್ವಕಪ್ ಪಂದ್ಯಾವಳಿ ಕ್ರಾಸ್ ಓವರ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ಭಾರತೀಯ ತಂಡ ಟೂರ್ನಿಯಿಂದ ಹೊರ ಬಿದ್ದಿದೆ. ಇದರೊಂದಿಗೆ 48 ವರ್ಷಗಳ ನಂತರ ವಿಶ್ವಕಪ್ ಗೆಲ್ಲುವ ಕನಸು ಭಗ್ನಗೊಂಡಿತು.
ಕಳಿಂಗ ಕ್ರೀಡಾಂಗಣದಲ್ಲಿ ಕಿಕ್ಕಿರಿದು ತುಂಬಿದ್ದ ಪ್ರೇಕ್ಷಕರ ಅಬ್ಬರದ ಬೆಂಬಲದ ಹೊರತಾಗಿಯೂ, ಉಭಯ ತಂಡಗಳು ತಲಾ ಮೂರು ಗೋಲು ಗಳಿಸಿ ಸಮಬಲ ಸಾಧಿಸಿದ್ದವು. ಪೆನಾಲ್ಟಿ ಶೂಟೌಟ್ ನಲ್ಲಿ 4-5 ಅಂತರದಲ್ಲಿ ಭಾರತ ಪರಾಭವಗೊಂಡಿತು. ನಾಯಕ ಹರ್ಮನ್‌ಪ್ರೀತ್ ಸಿಂಗ್ ಭಾರತವನ್ನು ಗೆಲುವಿನತ್ತ ಕೊಂಡೊಯ್ಯುವ ಸುವರ್ಣ ಅವಕಾಶವನ್ನು ಹೊಂದಿದ್ದರು ಆದರೆ ಅವರು ಗುರಿ ತಲುಪವಲ್ಲಿ ವಿಫಲರಾದರು.
Bhubaneswar | Hockey World Cup 2023: India lose 4-5 in shootout after the match ended 3-3 in full-time against New Zealand in cross-over match.
— ANI (@ANI) January 22, 2023
ಮಂಗಳವಾರ ನಡೆಯಲಿರುವ ಕ್ವಾರ್ಟರ್ ಫೈನಲ್‌ನಲ್ಲಿ ಬಿ ಪೂಲ್‌ನಲ್ಲಿ ಅಗ್ರಸ್ಥಾನದಲ್ಲಿರುವ ಹಾಲಿ ಚಾಂಪಿಯನ್ ಬೆಲ್ಜಿಯಂ ತಂಡವನ್ನು ನ್ಯೂಜಿಲೆಂಡ್ ಎದುರಿಸಲಿದೆ.