ಕುಸ್ತಿಪಟುಗಳು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ: ಡಬ್ಲ್ಯೂಎಫ್ ಐ ಮುಖ್ಯಸ್ಥ ಆರೋಪ
ತಮ್ಮ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಘೋಷಣೆ ಕೂಗಿರುವುದಾಗಿ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಶುಕ್ರವಾರ ಆರೋಪಿಸಿದ್ದಾರೆ.
Published: 26th May 2023 06:17 PM | Last Updated: 27th May 2023 02:38 PM | A+A A-

ಡಬ್ಲ್ಯೂಎಫ್ ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್
ನವದೆಹಲಿ: ತಮ್ಮ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಘೋಷಣೆ ಕೂಗಿರುವುದಾಗಿ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಶುಕ್ರವಾರ ಆರೋಪಿಸಿದ್ದಾರೆ.
ತಮ್ಮ ಬಂಧನಕ್ಕೆ ಒತ್ತಾಯಿಸಿ ವಿನೇಶ್ ಫೋಗಟ್, ಬಜರಂಗ್ ಪುನಿಯಾ ಸಾಕ್ಷಿ ಮಲಿಕ್ ಮತ್ತಿತರ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಸುತ್ತಿರುವ ಪ್ರತಿಭಟನೆ ದೆಹಲಿಯಿಂದ ಪಂಜಾಬ್ ಮತ್ತು ಖಲಿಸ್ತಾನ್ ಕಡೆಗೆ ಚಲಿಸುತ್ತಿದೆ ಎಂದು ಅವರು ಹೇಳಿದರು. ಆದರೆ, ಈ ಬಗ್ಗೆ ಹೆಚ್ಚಿನ ವಿವರಣೆ ನೀಡಲು ನಿರಾಕರಿಸಿದರು.
ಇದನ್ನೂ ಓದಿ: ಬ್ರಿಜ್ ಭೂಷಣ್ ಸಿಂಗ್ ಗೆ ನಾರ್ಕೋ ಪರೀಕ್ಷೆಗೆ ಒಳಪಡಲು ಕುಸ್ತಿ ಪಟುಗಳ ಸವಾಲು
ಶುಕ್ರವಾರ ಬಲರಾಂಪುರಕ್ಕೆ ಆಗಮಿಸಿದ ಬ್ರಿಜ್ ಭೂಷಣ್ ಶರಣ್ ಸಿಂಗ್, ಬಜರಂಗ್ ಪುನಿಯಾ ಬೇರೊಬ್ಬರ ಪರವಾಗಿ ಮಾತನಾಡುತ್ತಿದ್ದಾರೆ ಎಂದರು. ಜೂನ್ 5 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಸ್ವಾಮೀಜಿಗಳ ರ್‍ಯಾಲಿ ಸಿದ್ಧತೆಗಾಗಿ ಬಲರಾಂಪುರ್‌ಕ್ಕೆ ಆಗಮಿಸಲಿರುವ ಸಿಂಗ್, ಈ ರ್‍ಯಾಲಿಯಲ್ಲಿ 11 ಲಕ್ಷ ಭಕ್ತರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯನ್ನು ದೊಡ್ಡ ಪ್ರಮಾಣದಲ್ಲಿ ದುರುಪಯೋಗವಾಗುತ್ತಿದ್ದು, ಅದನ್ನು ಬದಲಾಯಿಸಲು ಸರ್ಕಾರವನ್ನು ಒತ್ತಾಯಿಸಲು ಸ್ವಾಮೀಜಿಗಳ ನೇತೃತ್ವದಲ್ಲಿ ರ್‍ಯಾಲಿ ನಡೆಸಲಾಗುತ್ತಿದೆ ಎಂದು ಸಿಂಗ್
ನಿನ್ನೆ ತಿಳಿಸಿದ್ದರು.