Paris Olympics 2024: ಶೂಟಿಂಗ್ ನಲ್ಲಿ ಸ್ವಪ್ನಿಲ್ ಕುಸಾಲೆಗೆ ಕಂಚು, ಭಾರತಕ್ಕೆ 3ನೇ ಪದಕ
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಶೂಟರ್ ಸ್ವಪ್ನಿಲ್ ಕುಸಾಲೆ ಒಲಿಂಪಿಕ್ಸ್‌ನಲ್ಲಿ 50 ಮೀಟರ್ ರೈಫಲ್ 3ಪಿ ಈವೆಂಟ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಶೂಟರ್ ಎಂಬ ಇತಿಹಾಸ ಬರೆದಿದ್ದಾರೆ. ಕುಸಾಲೆ 451.4 ಅಂಕ ಗಳಿಸಿ ಚೀನಾದ ಯುಕುನ್ ಲಿಯು (ಚಿನ್ನ) ಮತ್ತು ಉಕ್ರೇನ್‌ನ ಸೆರ್ಹಿ ಕುಲಿಶ್ ಅವರನ್ನು ಹಿಂದಿಕ್ಕಿ, ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ನ ಪುರುಷರ 50 ಮೀ ರೈಫಲ್ 3 ಸುತ್ತಿನಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. 8 ಮಂದಿ ಒಳಗೊಂಡಿದ್ದ ಫೈನಲ್ ಸುತ್ತಿನಲ್ಲಿ ಒಟ್ಟು 451.4 ಅಂಕಗಳನ್ನು ಕಲೆಹಾಕುವ ಮೂಲಕ ಭಾರತೀಯ ಶೂಟರ್ ಮೂರನೇ ಸ್ಥಾನ ಪಡೆದಿದ್ದಾರೆ. 7ನೇ ಸ್ಥಾನದೊಂದಿಗೆ ಫೈನಲ್ ಪ್ರವೇಶಿಸಿದ್ದ ಸ್ವಪ್ನಿಲ್ ಕುಸಾಲೆ ಅಂತಿಮ ಸುತ್ತಿನಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿದರು.
ಅಲ್ಲದೆ ಜೆಕ್ ರಿಪಬ್ಲಿಕ್ ನ ಶೂಟರ್ ಜಿರಿ ಪ್ರೀವ್ರಾಟ್ಸ್ಕಿ (440.7 ಅಂಕಗಳು) ಅವರನ್ನು ಹಿಂದಿಕ್ಕಿ ಸ್ವಪ್ನಿಲ್ ಕುಸಾಲೆ ಮೂರನೇ ಸ್ಥಾನಕ್ಕೇರಿರು. ಈ ಮೂಲಕ ಒಟ್ಟು 451.4 ಅಂಕಗಳನ್ನು ಕಲೆಹಾಕುವ ಮೂಲಕ ಭಾರತೀಯ ಶೂಟರ್ ಚೊಚ್ಚಲ ಒಲಿಂಪಿಕ್ಸ್ ಪದಕ ಗೆಲ್ಲುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ಪದಕಗಳ ಸಂಖ್ಯೆ ಮೂರಕ್ಕೇರಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ