ಪ್ಯಾರೀಸ್: Olympics 2024 ನ 50 ಕೆಜಿ ಮಹಿಳಾ ಕುಸ್ತಿ ವಿಭಾಗದಲ್ಲಿ ವಿನೇಶ್ ಫೋಗಟ್ ಫೈನಲ್ಸ್ ಪ್ರವೇಶಿಸಿದ್ದಾರೆ.
ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಲೋಪೆಜ್ ವಿರುದ್ಧ 5-0 ಅಂತರದಲ್ಲಿ ವಿನೇಶ್ ಫೋಗಟ್ ಗೆಲುವು ದಾಖಲಿಸಿದ್ದು, ಭಾರತಕ್ಕೆ ಮತ್ತೊಂದು ಪದಕ ಖಾತ್ರಿಯಾಗಿದೆ.
ಈ ವಿಭಾಗದಲ್ಲಿ ವಿಶ್ವದ ನಂ.1 ಕುಸ್ತಿ ಪಟುವನ್ನು ವಿನೇಶ್ ಫೋಗಟ್ ಮಣಿಸಿದ್ದು, ಒಲಂಪಿಕ್ಸ್ ಫೈನಲ್ಸ್ ಪ್ರವೇಶಿಸಿದ ಮೊದಲ ಮಹಿಳಾ ಕುಸ್ತಿ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇನ್ನು ಭಾರತದ ಚಿನ್ನದ ಹುಡುಗ ಎಂದೇ ಖ್ಯಾತಿ ಪಡೆದಿರುವ ನೀರಜ್ ಚೋಪ್ರಾ, ಪುರುಷರ ಜಾವೆಲಿನ್ ಎಸೆತ ವಿಭಾಗದಲ್ಲಿ ಫೈನಲ್ಸ್ ಪ್ರವೇಶಿಸಿದ್ದಾರೆ.
Advertisement