ರಾಜನಾಥ್ ಸಿಂಗ್ ಭೇಟಿ ಮಾಡಿದ ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್‌

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಎರಡು ಕಂಚಿನ ಪದಕ ಗೆದ್ದಿರುವ ಒಲಿಂಪಿಕ್ ಪದಕ ವಿಜೇತ ಮನು ಭಾಕರ್ ಅವರು ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದರು.
ರಾಜನಾಥ್ ಸಿಂಗ್ ಭೇಟಿ ಮಾಡಿದ ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್‌
ರಾಜನಾಥ್ ಸಿಂಗ್ ಭೇಟಿ ಮಾಡಿದ ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್‌
Updated on

ನವದೆಹಲಿ: ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ದೆಹಲಿಯ ಅವರ ಕಚೇರಿಯಲ್ಲಿ ಭೇಟಿಯಾಗಿಯಾಗಿದ್ದಾರೆ.

ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಫೋಟೋವನ್ನು ಮನು ಭಾಕರ್ ಅವರು ಹಂಚಿಕೊಂಡಿದ್ದು, ರಾಜನಾಥ್ ಸಿಂಗ್ ಅವರನ್ನು ನವದೆಹಲಿಯ ಅವರ ಕಚೇರಿಯಲ್ಲಿ ಭೇಟಿಯಾಗುವ ಅವಕಾಶ ಸಿಕ್ಕಿತು. ಅವರು ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆ ನನ್ನನ್ನು ಭೇಟಿ ಮಾಡಿದ್ದಕ್ಕೆ ನಾನು ಕೃತಜ್ಞಳಾಗಿದ್ದೇನೆ. ಅವರು ನನಗೆ ಬೆಂಬಲ ನೀಡಿ, ಪ್ರೇರಣೆಯ ಮಾತುಗಳಿಂದ ಸ್ಫೂರ್ತಿ ನೀಡಿದರು" ಎಂದು ಹೇಳಿದ್ದಾರೆ.

"ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಎರಡು ಕಂಚಿನ ಪದಕ ಗೆದ್ದಿರುವ ಒಲಿಂಪಿಕ್ ಪದಕ ವಿಜೇತ ಮನು ಭಾಕರ್ ಅವರು ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದರು.

"ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ದೇಶಕ್ಕಾಗಿ ಎರಡು ಕಂಚಿನ ಪದಕಗಳನ್ನು ಗೆದ್ದು ಇತಿಹಾಸ ಬರೆದ ಭಾರತದ ಏಸ್ ಶೂಟರ್ ಮನು ಭಾಕರ್ ಅವರನ್ನು ಭೇಟಿಯಾಗಿದ್ದು ಸಂತೋಷ ತಂದಿದೆ. ಆಕೆಯ ಅದ್ಭುತ ಪ್ರದರ್ಶನದಿಂದ ಪ್ರತಿಯೊಬ್ಬ ಭಾರತೀಯನೂ ಉತ್ಸುಕನಾಗಿದ್ದಾನೆ. ಆಕೆಯ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು" ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

22 ವರ್ಷದ ಶೂಟರ್ ಮನು ಭಾಕರ್ ಅವರು ನಿನ್ನೆ ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಮತ್ತು ಅವರ ಮಗ ಮತ್ತು ಕಾಂಗ್ರೆಸ್ ಸಂಸದ ದೀಪೇಂದರ್ ಹೂಡಾ ಅವರನ್ನು ಭೇಟಿಯಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com