Olympics 2024: ವಿನೇಶ್ ಪೋಗಟ್ 'ಬೆಳ್ಳಿ' ಪದಕ ಕನಸು ಭಗ್ನ; ಅರ್ಜಿ ವಜಾ ಮಾಡಿದ CAS

ಫೈನಲ್‌ನ ಪಂದ್ಯಕ್ಕೂ ಮುನ್ನ 100 ಗ್ರಾಂ ಅಧಿಕ ತೂಕ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ವಿನೇಶ್ ಪೊಗಟ್ ರನ್ನು ಅನರ್ಹಗೊಳಿಸಲಾಗಿತ್ತು. ಹೀಗಾಗಿ ತನಗೆ ಬೆಳ್ಳಿ ಪದಕವನ್ನು ನೀಡಬೇಕೆಂದು ವಿನೇಶ್ ಒತ್ತಾಯಿಸಿ ಮೇಲ್ಮನವಿ ಸಲ್ಲಿಸಿದ್ದರು.
ವಿನೇಶ್ ಪೋಗಟ್
ವಿನೇಶ್ ಪೋಗಟ್
Updated on

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನ 50 ಕೆಜಿ ಮಹಿಳಾ ಕುಸ್ತಿ ವಿಭಾಗದ ಫೈನಲ್‌ ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದರ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯವು ಇದೀಗ ಅರ್ಜಿಯನ್ನು ವಜಾ ಮಾಡಿದೆ.

ಪ್ಯಾರಿಸ್ ಒಲಿಂಪಿಕ್ಸ್‌ನ 50 ಕೆಜಿ ಮಹಿಳಾ ಕುಸ್ತಿ ವಿಭಾಗದ ಫೈನಲ್‌ ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ ಪ್ರಕರಣವನ್ನು ಆಲಿಸಿದ ಸಿಎಎಸ್ ತನ್ನ ನಿರ್ಧಾರವನ್ನು ಆಗಸ್ಟ್ 16ಕ್ಕೆ ಮುಂದೂಡಿತ್ತು. ಆದರೆ ಇಂದು ದಿಢೀರ್ ನಿರ್ಧಾರ ಪ್ರಕಟಿಸಿದ CAS ಅರ್ಜಿಯನ್ನು ವಜಾಗೊಳಿಸಿರುವುದಾಗಿ ಹೇಳಿದೆ.

ಫೈನಲ್‌ನ ಪಂದ್ಯಕ್ಕೂ ಮುನ್ನ 100 ಗ್ರಾಂ ಅಧಿಕ ತೂಕ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ವಿನೇಶ್ ಪೊಗಟ್ ರನ್ನು ಅನರ್ಹಗೊಳಿಸಲಾಗಿತ್ತು. ಹೀಗಾಗಿ ತನಗೆ ಬೆಳ್ಳಿ ಪದಕವನ್ನು ನೀಡಬೇಕೆಂದು ವಿನೇಶ್ ಒತ್ತಾಯಿಸಿ ಮೇಲ್ಮನವಿ ಸಲ್ಲಿಸಿದ್ದರು.

ವಿನೇಶ್ ಪೋಗಟ್
Vinesh Phogat: ಪದಕ ನಿರ್ಧಾರ ಮತ್ತೆ ಮುಂದೂಡಿಕೆ; ವಿನೇಶ್ ಇನ್ನೆಷ್ಟು ದಿನ ಕಾಯಬೇಕು!

ವಿನೇಶ್ ಅವರ ತಂಡವು ಮಾರ್ಚ್ 7ರ ಸಂಜೆ ಸಿಎಎಸ್ ಅನ್ನು ಸಂಪರ್ಕಿಸಿತ್ತು. ವಿನೇಶ್ ಅವರ ಮನವಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯವು ಸ್ವೀಕರಿಸಿದ್ದು, ಪ್ರಕರಣದ ವಿಚಾರಣೆ ನಡೆಸಿದೆ. ಆದರೆ ಭಾರತೀಯ ವಕೀಲರನ್ನು ನೇಮಿಸಲು ಸಾಧ್ಯವಾಗದ ಕಾರಣ ಪ್ರಕರಣವನ್ನು ಶುಕ್ರವಾರಕ್ಕೆ ಮುಂದೂಡಲಾಯಿತು. ಆದಾಗ್ಯೂ, ಸಿಎಎಸ್ ವಿನೇಶ್ ಅವರ ಬೇಡಿಕೆಯನ್ನು ಒಪ್ಪಿಕೊಂಡು ವಕೀಲರ ನೇಮಕಕ್ಕೆ ಕಾಲಾವಕಾಶ ನೀಡಿತ್ತು. ಹೀಗಾಗಿ ಹಿರಿಯ ವಕೀಲರಾದ ಹರೀಶ್ ಸಾಳ್ವೆ ಮತ್ತು ವಿದುಷ್ಪತ್ ಸಿಂಘಾನಿಯಾ ಅವರು ಇಂದು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ವಾದ ಮಂಡಿಸಿದರು.

ವಿನೇಶ್ ಗೆ ಮೂರನೇ ಬಾರಿಗೂ ಶಾಕ್

ವಿನೇಶ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಾತ್ರವಲ್ಲ. ಈ ಹಿಂದೆಯೂ ಎರಡು ಬಾರಿ ಆಘಾತ ಎದುರಾಗಿತ್ತು. ವಿನೇಶ್ ಅವರು 2016ರ ರಿಯೋ ಗೇಮ್ಸ್‌ನಲ್ಲಿ ಒಲಿಂಪಿಕ್ಸ್‌ಗೆ ಪದಾರ್ಪಣೆ ಮಾಡಿದ್ದರು. 2016ರ ರಿಯೊ ಒಲಿಂಪಿಕ್ಸ್‌ನ ಕ್ವಾರ್ಟರ್-ಫೈನಲ್‌ನಲ್ಲಿ ಮೊಣಕಾಲಿನ ಗಾಯದಿಂದಾಗಿ ಅವರ ಪದಕದ ನಿರೀಕ್ಷೆಯು ಭಗ್ನಗೊಂಡಿತು. ಇದರ ನಂತರ, ಅವರು 2020ರಲ್ಲಿ ಟೋಕಿಯೊ ಒಲಿಂಪಿಕ್ಸ್‌ನ ಕ್ವಾರ್ಟರ್-ಫೈನಲ್‌ನಲ್ಲಿ 53 ಕೆಜಿ ವಿಭಾಗದಲ್ಲಿ ಸೋತಿದ್ದರು. ಈಗ 2024ರಲ್ಲಿ ಅವರು ಅಧಿಕ ತೂಕದ ಕಾರಣದಿಂದ ಹೊರಗುಳಿದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com