Paralympics 2024: 100 ಮೀ. ಓಟದ ಸ್ಪರ್ಧೆಯಲ್ಲಿ ಕಂಚು ಗೆದ್ದ ಪ್ರೀತಿ ಪಾಲ್; ಭಾರತದ ಪದಕಗಳ ಸಂಖ್ಯೆ ಮೂರಕ್ಕೆ ಏರಿಕೆ

ಮಹಿಳೆಯರ 100 ಮೀಟರ್ ಟಿ35 ಸ್ಪರ್ಧೆಯ ಫೈನಲ್‌ನಲ್ಲಿ ಪ್ರೀತಿ ಪಾಲ್ ಅವರು ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು.
ಪ್ರೀತಿ ಪಾಲ್
ಪ್ರೀತಿ ಪಾಲ್
Updated on

ಪ್ಯಾರಿಸ್: ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಮಹಿಳೆಯರ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಭಾರತದ ಅಥ್ಲೀಟ್ ಪ್ರೀತಿ ಪಾಲ್ ಅವರು ಕಂಚಿನ ಪದಕ ಗೆದ್ದಿದ್ದಾರೆ. ಇದರೊಂದಿಗೆ ಮೊದಲ ದಿನವೇ ಭಾರತದ ಪದಕಗಳ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಮಹಿಳೆಯರ 100 ಮೀಟರ್ ಟಿ35 ಸ್ಪರ್ಧೆಯ ಫೈನಲ್‌ನಲ್ಲಿ ಪ್ರೀತಿ ಪಾಲ್ ಅವರು ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು. ಇದರೊಂದಿಗೆ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಟ್ರ್ಯಾಕ್ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಪಾಲ್ ಅವರು 100 ಮೀಟರ್ಸ್ ಸ್ಪರ್ಧೆಯಲ್ಲಿ 14.21 ಸೆಕೆಂಡ್‌ಗಳಲ್ಲಿ ಗುರಿ ತಲುಪುವ ಮೂಲಕ ಕಂಚಿನ ಪದಕವನ್ನು ಪಡೆದರು. 17ನೇ ಆವೃತ್ತಿಯ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು ಮೂರನೇ ಪದಕವಾಗಿದೆ.

ಪ್ರೀತಿ ಪಾಲ್
Paralympics 2024: ಮಹಿಳೆಯರ 10 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಅವನಿ ಲೇಖರ ಗೆ ಚಿನ್ನ; ಮೋನಾ ಅಗರ್ವಾಲ್ ಗೆ ಕಂಚು!

ಚೀನಾದ ಝೌ ಜಿಯಾ 13.58 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರು. ಇನ್ನು ಚೀನಾದವರೆ ಆದ ಗುವೊ ಕಿಯಾನ್ಕಿಯಾನ್ 13.74 ಸೆಕೆಂಡುಗಳಲ್ಲಿ ಗುರಿ ಮುಟ್ಟಿ ಬೆಳ್ಳಿ ಪದಕ ಗೆದ್ದರು.

ಉತ್ತರ ಪ್ರದೇಶ ಪ್ರೀತಿ ಪಾಲ್ ಅವರು ಪ್ಯಾರಿಸ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆಯಲು ಕೋಬ್‌ನಲ್ಲಿ ನಡೆದ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2024 ರಲ್ಲಿ ಕಂಚಿನ ಪದಕವನ್ನು ಗೆದ್ದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com