
ಪಶ್ಚಿಮ ಆಫ್ರಿಕಾದ ಗಿನಿಯಾದಲ್ಲಿ ಫುಟ್ಬಾಲ್ ಪಂದ್ಯದ ವೇಳೆ ಸಾಕಷ್ಟು ಹಿಂಸಾಚಾರ ನಡೆದಿದೆ. ಅಭಿಮಾನಿಗಳ ನಡುವೆ ಘರ್ಷಣೆ ನಡೆದಿದ್ದು ಇದರಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.
ಭಾನುವಾರ ಗಿನಿಯಾದ ಎರಡನೇ ಅತಿದೊಡ್ಡ ನಗರವಾದ ಎನ್'ಜಾರೆಕೋರ್‌ನಲ್ಲಿ ನಡೆದ ಫುಟ್‌ಬಾಲ್ ಪಂದ್ಯದ ವೇಳೆ ಅಭಿಮಾನಿಗಳ ನಡುವಿನ ಘರ್ಷಣೆಯಲ್ಲಿ ನೂರಾರು ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆ ಮೂಲಗಳು ಎಎಫ್‌ಪಿಗೆ ತಿಳಿಸಿವೆ. ಆಸ್ಪತ್ರೆಯಲ್ಲಿ ಕಣ್ಣು ಹಾಯಿಸಿದಷ್ಟು ಶವಗಳ ರಾಶಿ ಕಂಡುಬರುತ್ತದೆ. ಕಾರಿಡಾರ್‌ಗಳಲ್ಲಿ ಅನೇಕ ಶವಗಳು ನೆಲದ ಮೇಲೆ ಬಿದ್ದಿವೆ, ಶವಾಗಾರ ತುಂಬಿದೆ ಎಂದು ವೈದ್ಯರು ಹೇಳಿದರು.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್
ಈ ಹಿಂಸಾಚಾರದ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೋಗಳನ್ನು ಖಚಿತಪಡಿಸಲು ಸಾಧ್ಯವಾಗಿಲ್ಲ. ವೀಡಿಯೊದಲ್ಲಿ, ಪಂದ್ಯದ ಹೊರಗಿನ ರಸ್ತೆಯಲ್ಲಿ ಗೊಂದಲದ ವಾತಾವರಣ ಗೋಚರಿಸುತ್ತದೆ. ಸಾಕ್ಷಿಗಳ ಪ್ರಕಾರ, ಕೋಪಗೊಂಡ ಪ್ರತಿಭಟನಾಕಾರರು ಪೊಲೀಸ್ ಠಾಣೆಯನ್ನು ಧ್ವಂಸಗೊಳಿಸಿದ್ದು ಬೆಂಕಿ ಹಚ್ಚಿದ್ದಾರೆ.
ಮ್ಯಾಚ್ ರೆಫರಿ ವಿವಾದಾತ್ಮಕ ನಿರ್ಧಾರ ನೀಡಿದ ನಂತರ ಹಿಂಸಾಚಾರ ಪ್ರಾರಂಭವಾಯಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಇದಾದ ನಂತರ ಅಭಿಮಾನಿಗಳು ಆಕ್ರೋಶಗೊಂಡಿದ್ದು ನಂತರ ಹಿಂಸಾಚಾರ ಭುಗಿಲೆದ್ದಿತು. ಸ್ಥಳೀಯ ಮಾಧ್ಯಮಗಳ ಪ್ರಕಾರ, ಈ ಪಂದ್ಯವು ಗಿನಿಯಾದ ಜುಂಟಾ ನಾಯಕ ಮಮಡಿ ಡೌಂಬೌಯಾ ಅವರ ಗೌರವಾರ್ಥ ಆಯೋಜಿಸಲಾದ ಪಂದ್ಯಾವಳಿಯ ಭಾಗವಾಗಿತ್ತು.
Advertisement