ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ: ಭಾರತ ಹಾಕಿ ತಂಡದ ಆಟಗಾರನ ವಿರುದ್ಧ FIR

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದೆ ಆರೋಪದ ಮೇರೆಗೆ ಭಾರತ ಹಾಕಿ ತಂಡದ ಆಟಗಾರ ವರುಣ್ ಕುಮಾರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಭಾರತ ಹಾಕಿ ತಂಡದ ಆಟಗಾರ ವರುಣ್ ಕುಮಾರ್
ಭಾರತ ಹಾಕಿ ತಂಡದ ಆಟಗಾರ ವರುಣ್ ಕುಮಾರ್

ಬೆಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದೆ ಆರೋಪದ ಮೇರೆಗೆ ಭಾರತ ಹಾಕಿ ತಂಡದ ಆಟಗಾರ ವರುಣ್ ಕುಮಾರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಅಪ್ರಾಪ್ತ ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿ ವಂಚನೆ ಮಾಡಿದ ಆರೋಪದಡಿ ಭಾರತೀಯ ಹಾಕಿ ತಂಡದ ಡಿಫೆಂಡರ್ ಆಗಿರುವ ವರುಣ್ ಕುಮಾರ್ ಅವರ ವಿರುದ್ದ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. 2019ರಲ್ಲಿ ಸಂತ್ರಸ್ತ ಯುವತಿಗೆ 17 ವರ್ಷ ಇರುವಾಗಲೇ ಆರೋಪಿ ವರುಣ್ ಮದುವೆಯಾಗುವುದಾಗಿ ನಂಬಿಸಿ, ಆಕೆಯ ಜತೆಗೆ ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ಯುವತಿ ಗಂಭೀರ ಆರೋಪ ಮಾಡಿದ್ದಾಳೆ.

ಮೂಲಗಳ ಪ್ರಕಾರ 2016-17ನೇ ಸಾಲಿನಲ್ಲಿ ನ್ಯಾಷನಲ್ ಸೆಂಟರ್ ಆಗಿ ಎಕ್ಸಿಲೆನ್ಸ್​ನಿಂದ ವಾಲಿಬಾಲ್ ಕ್ರೀಡೆಯಲ್ಲಿ ಆಯ್ಕೆಯಾಗಿ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ದಕ್ಷಿಣ ವಿಭಾಗದಲ್ಲಿ ಸಂತ್ರಸ್ತ ಯುವತಿ ತರಬೇತಿ ಪಡೆಯುತ್ತಿದ್ದರು. ಈ ಸಮಯದಲ್ಲಿ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಹಾಸ್ಟೆಲ್‌ವೊಂದರಲ್ಲಿ ನೆಲೆಸಿದ್ದಳು. ಸಾಮಾಜಿಕ ಜಾಲತಾಣದ ಮೂಲಕ ಹಾಕಿ ಆಟಗಾರ ವರುಣ್ ಕುಮಾರ್ ಸಂತ್ರಸ್ತ ಯುವತಿಗೆ ಪರಿಚಯವಾಗಿದ್ದರು. ಈ ಸಮಯದಲ್ಲಿ ಯುವತಿಯು 17 ವರ್ಷದವಳಾಗಿದ್ದಳು. ಯುವತಿಯ ಜತೆಗೆ ಸ್ನೇಹಿತನಾದ ವರುಣ್ ಕುಮಾರ್ ಬಳಿಕ ಆಕೆಯನ್ನು ಪ್ರೀತಿಸುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ.

ಪ್ರಸ್ತುತ ಏರ್‌ಲೈನ್ ಸಿಬ್ಬಂದಿಯಾಗಿ ಮಹಿಳೆ ಕಾರ್ಯನಿರ್ವಹಿಸುತ್ತಿದ್ದು, 2018 ರಲ್ಲಿ ಅರ್ಜುನ ಪ್ರಶಸ್ತಿ ಪುರಸ್ಕೃತ ಕುಮಾರ್ ಅವರು ಇಲ್ಲಿನ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ (ಎಸ್‌ಎಐ) ತರಬೇತಿ ಪಡೆಯುತ್ತಿದ್ದಾಗ ಅವರ ಸಂಪರ್ಕಕ್ಕೆ ಬಂದಾಗ ತನಗೆ 17 ವರ್ಷ ವಯಸ್ಸಾಗಿತ್ತು ಎಂದು ಹೇಳಿಕೊಂಡಿದ್ದಾರೆ.

ದೂರಿನಲ್ಲಿರುವಂತೆ  “ಯುವತಿ 17 ವರ್ಷದವಳಾಗಿದ್ದಾಗಲೇ 2019ರಲ್ಲಿ ನೈಟ್ ಡಿನ್ನರ್ ನೆಪದಲ್ಲಿ ಜಯನಗರಕ್ಕೆ ಕರೆದುಕೊಂಡು ಹೋಗಿದ್ದ ವರುಣ್ ಕುಮಾರ್ ಮದುವೆಯಾಗುವುದಾಗಿ ನಂಬಿಸಿ ಆಕೆಯ ಜತೆಗೆ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದನು. ಇದಲ್ಲದೇ, ನಿರಂತರ ಐದು ವರ್ಷಗಳ ಕಾಲ ಮದುವೆಯಾಗುವುದಾಗಿ ನಂಬಿಸಿ ಸಂತ್ರಸ್ತ ಯುವತಿ ಜತೆಗೆ ಆರೋಪಿ ವರುಣ್ ದೈಹಿಕ ಸಂಪರ್ಕ ಮಾಡಿದ್ದನು. ಆದರೆ ಒಂದು ವರ್ಷದ ಹಿಂದೆ ಸಂತ್ರಸ್ತ ಯುವತಿಯ ತಂದೆ ಮೃತಪಟ್ಟಾಗ ಮನೆ ಬಳಿ ಬಂದು ವರುಣ್ ಸಾಂತ್ವನ ಹೇಳಿ ಹೋಗಿದ್ದನು. ಆ ಘಟನೆ ಬಳಿಕ ವರುಣ್ ಈಗ ಸಂಪರ್ಕಕ್ಕೆ ಸಿಗದೇ ವಂಚಿಸುತ್ತಿದ್ದಾನೆ. ಮದುವೆಗಾಗಿ ಒತ್ತಡ ಹೇರಿದರೆ ಆಕೆಯ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ.

ದೂರಿನ ಕುರಿತು ಮಾತನಾಡಿರುವ ಪೊಲೀಸ್ ಅಧಿಕಾರಿಯೊಬ್ಬರು, "ಮಹಿಳೆಯಿಂದ ಬಂದ ದೂರಿನ ಆಧಾರದ ಮೇಲೆ, ನಾವು ಹಾಕಿ ಆಟಗಾರನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೋ) ಮತ್ತು ಸೆಕ್ಷನ್ 376 (ಅತ್ಯಾಚಾರ) ಮತ್ತು 420 (ವಂಚನೆ ಮತ್ತು ಅಪ್ರಾಮಾಣಿಕವಾಗಿ ಆಸ್ತಿ ವಿತರಣೆಗೆ ಪ್ರೇರೇಪಿಸುವುದು) ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಸೂಕ್ತ ಸೆಕ್ಷನ್ ಅಡಿಯಲ್ಲಿ ಸೋಮವಾರ ಪ್ರಕರಣ ದಾಖಲಿಸಿದ್ದೇವೆ. " ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶದವರಾದ ವರುಣ್ ಕುಮಾರ್ ಅವರು 2017 ರಲ್ಲಿ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದ್ದರು. 2020ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತೀಯ ಪುರುಷರ ಹಾಕಿ ತಂಡ ಕಂಚಿನ ಪದಕ ಗೆದ್ದ ನಂತರ ಹಿಮಾಚಲ ಪ್ರದೇಶ ಸರ್ಕಾರವು ಕುಮಾರ್‌ಗೆ ಒಂದು ಕೋಟಿ ರೂಪಾಯಿ ಬಹುಮಾನವನ್ನು ಘೋಷಿಸಿತ್ತು. ಅವರು 2022 ರ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಬೆಳ್ಳಿ ಗೆದ್ದ ಭಾರತ ತಂಡದ ಭಾಗವಾಗಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com