
ನ್ಯೂಯಾರ್ಕ್: ‘ನೆವರ್ ಗೀವ್ ಅಪ್’ ಎಂಬ ಘೋಷವಾಕ್ಯದೊಂದಿಗೆ ರಿಂಗ್ ನಲ್ಲಿ ಕಾದಾಡುತ್ತಿದ್ದ ಮೆಗಾ ಸ್ಟಾರ್ John Cena ಇದೀಗ ತಮ್ಮ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಹೌದು.. ಡಬ್ಲ್ಯೂ ಡಬ್ಲ್ಯೂಇ(WWE) ಬಾಕ್ಸಿಂಗ್ ರಿಂಗ್ನಲ್ಲಿ 16 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಖ್ಯಾತ ರೆಸ್ಲರ್ ಜಾನ್ ಸೀನ(John Cena) ತಮ್ಮ ರೆಸ್ಲಿಂಗ್ ವೃತ್ತಿ ಜೀವನಕ್ಕೆ ತೆರೆ ಎಳೆಯಲು ಸಿದ್ಧರಾಗಿದ್ದಾರೆ. ಟೊರೊಂಟೋದಲ್ಲಿ ನಡೆದ ಮನಿ ಇನ್ ದಿ ಬ್ಯಾಂಕ್ ಟೂರ್ನಿಯಲ್ಲಿ ತಮ್ಮ ನಿವೃತ್ತಿ ಪ್ರಕಟಿಸಿದ್ದಾರೆ.
‘ದಿ ಲಾಸ್ಟ್ ಟೈಮ್ ಈಸ್ ನೌ” ಎಂದು ಬರೆದ ಟಿ-ಶರ್ಟ್ ಧರಿಸಿ ಸೀನಾ ತನ್ನ ನಿವೃತ್ತಿಯನ್ನು ಪ್ರಕಟಿಸಿದ್ದು, ಈ ವರ್ಷ ನಡೆಯುವ 2024ರ ರಾಯಲ್ ರಂಬಲ್, ಎಲಿಮಿನೇಶನ್ ಚೇಂಬರ್ ಮತ್ತು ರಸಲ್ ಮೇನಿಯಾ 41ರಲ್ಲಿ ಜಾನ್ ಸೀನಾ ಭಾಗಿಯಾಗಲಿದ್ದಾರೆ ಎಂದು ಮೂಲಗಳ ತಿಳಿಸಿವೆ.
ಜಾನ್ ಸೀನಾ ಮುಂದಿನ ವರ್ಷ ನಿವೃತ್ತಿಯಾಗಲಿದ್ದು, 2002ರಲ್ಲಿ ಡಬ್ಲ್ಯೂ ಡಬ್ಲ್ಯೂಇ ಕಂಪನಿಗೆ ಸೇರಿದ್ದ ಜಾನ್ ಸೀನ 13 ಬಾರಿ ಡಬ್ಲ್ಯೂ ಡಬ್ಲ್ಯೂಇ ಟೈಟಲ್, ಮೂರು ಬಾರಿ ಹೆವಿವೈಟ್ ಚಾಂಪಿಯನ್ ಶಿಪ್ ಮತ್ತು ಎರಡು ಬಾರಿ ರಾಯಲ್ ರಂಬಲ್ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದ್ದಾರೆ.
Advertisement