
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಭಾರತದ HS ಪ್ರಣಯ್ ಶುಭಾರಂಭ ಮಾಡಿದ್ದಾರೆ.
ಇಂದು ನಡೆದ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಪ್ರಣಯ್ ಜರ್ಮನಿಯ ಫ್ಯಾಬಿಯನ್ ರಾತ್ ರನ್ನು 21-18, 21-12 ಅಂಕಗಳ ಅಂತರದಲ್ಲಿ ಮಣಿಸಿ ಮುಂದಿನ ಹಂತಕ್ಕೆ ಪ್ರವೇಶ ಪಡೆದಿದ್ದಾರೆ.
ಅಂದಹಾಗೆ ಇದು ಪ್ರಣಯ್ ಗೆ ಚೊಚ್ಚಲ ಒಲಿಂಪಿಕ್ಸ್ ಆಗಿದ್ದು, ತಾವಾಡಿದ ಮೊದಲ ಪಂದ್ಯದಲ್ಲೇ ಗೆಲುವು ಸಾಧಿಸುವ ಮೂಲಕ ಪ್ರಣಯ್ ಭರವಸೆ ಮೂಡಿಸಿದ್ದಾರೆ.
Advertisement