ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ 2024: 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತದ ಸಾತ್ವಿಕ್ ರಾಜ್ ರಾಂಕಿರೆಡ್ಡಿ, ಚಿರಾಗ್ ಶೆಟ್ಟಿ!

ಭಾನುವಾರ ನಡೆದ 2024ರ ಫ್ರೆಂಚ್ ಓಪನ್ ಪುರುಷರ ಡಬಲ್ಸ್ ಬ್ಯಾಡ್ಮಿಂಟನ್ ಫೈನಲ್ ನಲ್ಲಿ ಗೆಲುವ ಮೂಲಕ ಭಾರತದ ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಎರಡನೇ ಬಾರಿಗೆ ಫ್ರೆಂಚ್ ಓಪನ್ ಪ್ರಶಸ್ತಿ ಮುಡಿಗೇರಿಸಿಕೊಂಡರು.
ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ- ಚಿರಾಗ್ ಶೆಟ್ಟಿ
ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ- ಚಿರಾಗ್ ಶೆಟ್ಟಿ

ಪ್ಯಾರಿಸ್: ಭಾನುವಾರ ನಡೆದ 2024ರ ಫ್ರೆಂಚ್ ಓಪನ್ ಪುರುಷರ ಡಬಲ್ಸ್ ಬ್ಯಾಡ್ಮಿಂಟನ್ ಫೈನಲ್ ನಲ್ಲಿ ಗೆಲುವ ಮೂಲಕ ಭಾರತದ ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಎರಡನೇ ಬಾರಿಗೆ ಫ್ರೆಂಚ್ ಓಪನ್ ಪ್ರಶಸ್ತಿ ಮುಡಿಗೇರಿಸಿಕೊಂಡರು.

ಭಾರತದ ಅಗ್ರ ಶ್ರೇಯಾಂಕದ ಈ ಜೋಡಿ ಫೈನಲ್ ಪಂದ್ಯದಲ್ಲಿ ಚೈನೀಸ್ ತೈಪೆಯ ಲೀ ಜೆ- ಹುಯಿ ಮತ್ತು ಯಾಂಗ್ ಫೊ ಹ್ಸುವಾನ್ ಜೋಡಿ ವಿರುದ್ಧ ನೇರ ಗೇಮ್ ಗಳ ಗೆಲುವು ದಾಖಲಿಸಿದರು. ಈ ಹಿಂದೆ 2022ರಲ್ಲಿ ಫ್ರೆಂಚ್ ಓಪನ್ ಪ್ರಶಸ್ತಿ ಗೆದ್ದಿದ್ದ ಈ ಜೋಡಿ ಭಾನುವಾರ 21-11, 21-17 ಅಂತರದಿಂದ ಗೆದ್ದು ಎರಡನೇ ಬಾರಿಗೆ ಚಾಂಪಿಯನ್ ಆದರು.

ಮೊದಲ ಗೇಮ್ ನಲ್ಲಿ ಸುಲಭವಾಗಿ ಗೆದ್ದ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಜೋಡಿ, ಎರಡನೇ ಪಂದ್ಯದಲ್ಲಿ ಕಠಿಣ ಹೋರಾಟ ನಡೆಸಿತು. ಆದಾಗ್ಯೂ, ಈ ಜೋಡಿ ಎರಡನೇ ಗೇಮ್ ನಲ್ಲೂ ಗೆಲುವು ಸಾಧಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com