ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ವಾರ್ಷಿಕ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್: ಸಿಎಂ ಸಿದ್ದರಾಮಯ್ಯ

ಇಂದು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮಿನಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ, ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ವಾರ್ಷಿಕ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ನೀಡಲು ಚಿಂತನೆ ನಡೆದಿದೆ ಎಂದರು.
ಮಿನಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಸಿಎಂ
ಮಿನಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಸಿಎಂ
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಕ್ರೀಡಾಪಟುಗಳಿಗೆ ಸಿಹಿ ಸುದ್ದಿ ನೀಡಿದ್ದು, ವಾರ್ಷಿಕ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ನೀಡುವ ಚಿಂತನೆ ಇದೆ ಎಂದು ಗುರುವಾರ ಹೇಳಿದ್ದಾರೆ.

ಇಂದು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮಿನಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ, ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ವಾರ್ಷಿಕ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ನೀಡಲು ಚಿಂತನೆ ನಡೆದಿದೆ. ಶೀಘ್ರವೇ ಇದರ ಬಗ್ಗೆ ಪರಿಶೀಲಿಸಿ ನಿರ್ಧಾರ ಪ್ರಕಟಿಸುತ್ತೇವೆ ಎಂದರು.

ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ಶೇ. 3 ರಷ್ಟು ಮೀಸಲಾತಿ ಇದೆ. ಇತರೆ ಇಲಾಖೆಯಲ್ಲಿ ಶೇ. 2 ರಷ್ಟು ಮೀಸಲಾತಿ ಇದೆ. ರಾಜ್ಯದ ಕ್ರೀಡಾಪಟುಗಳು ಕಾಮನ್​ವೆಲ್ತ್​, ಒಲಿಂಪಿಕ್ಸ್​ ನಲ್ಲಿ ಭಾಗವಹಿಸಿ. ಒಲಿಂಪಿಕ್ಸ್​ ಪದಕ ಗೆದ್ದ ರಾಜ್ಯದ ಕೀಡಾಪಟುಗಳಿಗೆ ಬಹುಮಾನ ನೀಡಲಾಗುತ್ತದೆ. ಚಿನ್ನ ಗೆದ್ರೆ 5 ಕೋಟಿ, ಬೆಳ್ಳಿ ಗೆದ್ದರೆ 3 ಕೋಟಿ ಬಹುಮಾನ ನೀಡುತ್ತೇವೆ ಎಂದರು.

ಮಿನಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಸಿಎಂ
ಸರ್ಕಾರ ಉರುಳಿಸಲು 50 ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ ಆಮಿಷ: BJP ವಿರುದ್ಧ ಸಿದ್ದರಾಮಯ್ಯ

ಮಿನಿ ಒಲಿಂಪಿಕ್ ಕ್ರೀಡಾಕೂಟ ಇಂದಿನಿಂದ ಆರಂಭ ಆಗ್ತಿದೆ. ಈ‌ ಕ್ರೀಡಾಕೂಟ ಕ್ರೀಡಾ ಇಲಾಖೆಯ ವತಿಯಿಂದ ಆಯೋಜನೆ ಮಾಡಲಾಗಿದೆ. ಈ ಕ್ರೀಡಾಕೂಟವನ್ನ ಅತ್ಯಂತ ಸಂತೋಷದಿಂದ‌ ಉದ್ಘಾಟನೆ ಮಾಡಿದ್ದೇನೆ. ರಾಜ್ಯದ ಮೂಲೆ‌ಮೂಲೆಗಳಿಂದ‌ ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಸುಮಾರು‌ ಐದು ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುತ್ತಿದ್ದಾರೆ. ನಿಮ್ಮೆಲ್ಲರಿಗೂ ಶುಭಾಶಯ ಹೇಳುತ್ತೇನೆ. ಕ್ರೀಡಾಂಗಣದಲ್ಲಿ ಭಾಗಿಯಾದ ಎಲ್ಲರೂ ಗೆಲ್ಲೋದಕ್ಕೆ ಸಾಧ್ಯವಿಲ್ಲ. ಆದರೆ ಕ್ರೀಡಾಕೂಟದಲ್ಲಿ ಭಾಗಿಯಾಗೋದು ಮುಖ್ಯ ಎಂದರು.

ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ರೆ ಐದು ಕೋಟಿ, ಬೆಳ್ಳಿ ಗೆದ್ರೆ ಮೂರು ಕೋಟಿ ಕೊಡ್ತಿದ್ದೇವೆ. ನೀವು ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗಿಯಾಗುವಷ್ಟರ ಮಟ್ಟಿಗೆ ಬೆಳೆಯಬೇಕು. ಕಾಮನ್ ವೆಲ್ತ್, ಏಷಿಯನ್ ಗೇಮ್ಸ್, ಒಲಿಂಪಿಕ್ಸ್ ನಂತಹ ದೊಡ್ಡ ದೊಡ್ಡ ವೇದಿಕೆಗೆ ಹೋಗಬೇಕು. ಜೊತೆಗೆ ಭಾರತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಧಿಸಿದರೆ ಸರ್ಕಾರಿ ಕೆಲಸ ಸಹ ಕೊಡುತ್ತಿದ್ದೇವೆ ಎಂದ ಸಿಎಂ ಸಿದ್ದರಾಮಯ್ಯ ಕಿವಿ ಮಾತು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com