Paralympics 2024: ಭಾರತಕ್ಕೆ ಮತ್ತೊಂದು ಪದಕ, ಡಿಸ್ಕಸ್ ಥ್ರೋನಲ್ಲಿ ಬೆಳ್ಳಿ ಗೆದ್ದ ಯೋಗೇಶ್ ಕಥುನಿಯಾ!

27 ವರ್ಷದ ಆಟಗಾರ ಈವೆಂಟ್‌ನಲ್ಲಿ 42.22 ಮೀಟರ್ ದೂರಕ್ಕೆ ಅತ್ಯುತ್ತಮವಾಗಿ ಎಸೆದಿದ್ದಾರೆ. ಇದು ಅವರ ಋತುವಿನ ಅತ್ಯುತ್ತಮ ಪ್ರದರ್ಶನವಾಗಿತ್ತು.
ಯೋಗೇಶ್ ಕಥುನಿಯಾ
ಯೋಗೇಶ್ ಕಥುನಿಯಾ
Updated on

ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ 2024ರಲ್ಲಿ ಭಾರತ ತಂಡದ ಅತ್ಯುತ್ತಮ ಪ್ರದರ್ಶನ ಮುಂದುವರೆದಿದೆ. ಭಾರತದ ಖಾತೆಗೆ ಮತ್ತೊಂದು ಪದಕ ಬಂದಿದೆ. ವಾಸ್ತವವಾಗಿ, ಸೋಮವಾರ ಸ್ಟೇಡ್ ಡಿ ಫ್ರಾನ್ಸ್‌ನಲ್ಲಿ ನಡೆದ ಪ್ಯಾರಿಸ್ 2024 ಪ್ಯಾರಾಲಿಂಪಿಕ್ಸ್‌ನ ಪ್ಯಾರಾ-ಅಥ್ಲೆಟಿಕ್ಸ್ ಪುರುಷರ ಡಿಸ್ಕಸ್ ಎಫ್ 56 ಫೈನಲ್‌ನಲ್ಲಿ ಯೋಗೇಶ್ ಕಥುನಿಯಾ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಈ ಮೂಲಕ ಭಾರತ ಎಂಟನೇ ಪದಕ ಗೆದ್ದಿದೆ.

27 ವರ್ಷದ ಆಟಗಾರ ಈವೆಂಟ್‌ನಲ್ಲಿ 42.22 ಮೀಟರ್ ದೂರಕ್ಕೆ ಅತ್ಯುತ್ತಮವಾಗಿ ಎಸೆದಿದ್ದಾರೆ. ಇದು ಅವರ ಋತುವಿನ ಅತ್ಯುತ್ತಮ ಪ್ರದರ್ಶನವಾಗಿತ್ತು. ಬ್ರೆಜಿಲ್‌ನ ಕ್ಲೌಡಿನಿ ಬಟಿಸ್ಟಾ ಡಾಸ್ ಸ್ಯಾಂಟೋಸ್ 46.86 ಮೀಟರ್‌ಗಳ ಪ್ಯಾರಾಲಿಂಪಿಕ್ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದರು. ಗ್ರೀಸ್‌ನ ಕಾನ್‌ಸ್ಟಾಂಟಿನೋಸ್ ಝೌನಿಸ್ 41.32 ಎಸೆದು ಕಂಚಿನ ಪದಕ ಗೆದ್ದರೆ, ಸ್ಲೋವಾಕಿಯಾದ ಡುಸಾನ್ ಲಕ್ಜ್ಕೊ 41.20 ಮೀಟರ್‌ ದೂರ ಎಸೆದು ನಾಲ್ಕನೇ ಸ್ಥಾನ ಪಡೆದರು. ಸೆರ್ಬಿಯಾದ ನೆಬೊಜ್ಸಾ ಎರಿಕ್ ಅರ್ಹತೆ ಪಡೆದರೂ ಫೈನಲ್‌ನಲ್ಲಿ ಭಾಗವಹಿಸಲಿಲ್ಲ.

ನಿನ್ನೆ ಭಾರತದ ಮಹಿಳಾ ಅಥ್ಲೀಟ್ ಪ್ರೀತಿ ಪಾಲ್ ಮಹಿಳೆಯರ 200 ಮೀಟರ್ ಓಟದ (ಟಿ35) ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದರು. ಪ್ರೀತಿಪಾಲ್ 30.01 ಸೆಕೆಂಡುಗಳಲ್ಲಿ ಓಟವನ್ನು ಪೂರ್ಣಗೊಳಿಸಿ ಮೂರನೇ ಸ್ಥಾನ ಪಡೆದರು. ಹಾಲಿ ಪ್ಯಾರಾಲಿಂಪಿಕ್ಸ್‌ನಲ್ಲಿ ಪ್ರೀತಿಗೆ ಇದು ಎರಡನೇ ಕಂಚಿನ ಪದಕವಾಗಿದೆ.

ಯೋಗೇಶ್ ಕಥುನಿಯಾ
Paralympics 2024: ಇತಿಹಾಸ ಬರೆದ ಭಾರತ; ಓಟದ ಸ್ಪರ್ಧೆಯಲ್ಲಿ Preethi Pal ಗೆ ಕಂಚು, ಹೈಜಂಪ್ ನಲ್ಲಿ Nishad Kumar ಗೆ ಬೆಳ್ಳಿ ಪದಕ!

ಇದಕ್ಕೂ ಮುನ್ನ 100 ಮೀಟರ್‌ ಓಟದಲ್ಲಿ ಪ್ರೀತಿ ಕಂಚಿನ ಪದಕ ಜಯಿಸಿದ್ದರು. ಇದರೊಂದಿಗೆ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಭಾರತದ ಪದಕಗಳ ಸಂಖ್ಯೆ ಈಗ 7ಕ್ಕೆ ತಲುಪಿತ್ತು. ಭಾರತ ಇದುವರೆಗೆ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕಗಳನ್ನು ಗೆದ್ದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com