ಪ್ಯಾರಿಸ್: ಪ್ಯಾರಿಸ್ ನಲ್ಲಿ ಮುಕ್ತಾಯವಾದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಐತಿಹಾಸಿಕ ಪ್ರದರ್ಶನ ನೀಡಿದ್ದು, ಇದೇ ಮೊದಲ ಬಾರಿಗೆ ಗರಿಷ್ಟ ಪದಕಗಳೊಂದಿಗೆ ಕ್ರೀಡಾಕೂಟದಲ್ಲಿ ತನ್ನ ಅಭಿಯಾನ ಮುಕ್ತಾಯಗೊಳಿಸಿದೆ.
ಹೌದು.. ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಪ್ರಯಾಣ ಅಂತ್ಯಗೊಂಡಿದೆ. ಅಥ್ಲೀಟ್ ಪೂಜಾ ಓಜಾ, ಮಹಿಳೆಯರ ಪ್ಯಾರಾ ಕ್ಯಾನೋ KL1 200 ಮೀಟರ್ ಸ್ಪರ್ಧೆಯ ಸೆಮಿಫೈನಲ್‌ನಲ್ಲಿ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಫೈನಲ್ ರೇಸ್ನಿಂದ ಹೊರಬಿದ್ದರು. ಇದರೊಂದಿಗೆ ಭಾರತದ ಅಭಿಯಾನವೂ ಕೊನೆಗೊಂಡಿತು.
ಅದಾಗ್ಯೂ ಈ ಬಾರಿಯ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಇತಿಹಾಸ ಸೃಷ್ಟಿಸಿದ್ದು, ಈ ಬಾರಿಯ ಪ್ಯಾರಾಲಿಂಪಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತ ದಾಖಲೆಯ 29 ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಈ ಪೈಕಿ ಏಳು ಚಿನ್ನ, ಒಂಬತ್ತು ಬೆಳ್ಳಿ ಮತ್ತು 13 ಕಂಚು ಸೇರಿವೆ.
ವಾಸ್ತವವಾಗಿ ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಭಾರತ ಇಷ್ಟು ಸಂಖ್ಯೆಯ ಪದಕಗಳನ್ನು ಗೆದ್ದಿದ್ದು, ಇದೇ ಮೊದಲು. ಇದಕ್ಕೂ ಮೊದಲು ಟೊಕಿಯೋ ಪ್ಯಾರಾಲಿಂಪಿಕ್ನಲ್ಲಿ 19 ಪದಕಗಳನ್ನು ಗೆದ್ದಿದ್ದು, ಭಾರತದ ಅತ್ಯುತ್ತಮ ಪ್ರದರ್ಶನವಾಗಿತ್ತು.
Advertisement