ನಿವೃತ್ತಿ ಹೊಂದಲು ಬಯಸಿದಾಗ ವೈಯಕ್ತಿಕವಾಗಿ ಮಾಧ್ಯಮಗಳ ಮುಂದೆ ಘೋಷಿಸುತ್ತೇನೆ: ಬಾಕ್ಸರ್ ಮೇರಿ ಕೋಮ್ ಸ್ಪಷ್ಟನೆ

ನಾನು ಇನ್ನೂ ನಿವೃತ್ತಿ ಘೋಷಿಸಿಲ್ಲ. ನಾನು ನಿವೃತ್ತಿ ಹೊಂದಲು ಬಯಸಿದಾಗ ವೈಯಕ್ತಿಕವಾಗಿ ಮಾಧ್ಯಮಗಳ ಮುಂದೆ ಬರುತ್ತೇನೆ, ನಾನು ನಿವೃತ್ತಿ ಘೋಷಿಸಿದ್ದೇನೆ ಎಂದು ಕೆಲವು ಮಾಧ್ಯಮಗಳಲ್ಲಿ ತಪ್ಪಾಗಿ ವರದಿಯಾಗಿದೆ. ಇದು ನಿಜವಲ್ಲ' ಎಂದು  ಬಾಕ್ಸರ್ ಮೇರಿಕೋಮ್ ಸ್ಪಷ್ಟ ಪಡಿಸಿದ್ದಾರೆ.
ಮೇರಿ ಕೋಮ್
ಮೇರಿ ಕೋಮ್
Updated on

ನವದೆಹಲಿ: ನಾನು ಇನ್ನೂ ನಿವೃತ್ತಿ ಘೋಷಿಸಿಲ್ಲ. ನಾನು ನಿವೃತ್ತಿ ಹೊಂದಲು ಬಯಸಿದಾಗ ವೈಯಕ್ತಿಕವಾಗಿ ಮಾಧ್ಯಮಗಳ ಮುಂದೆ ಬರುತ್ತೇನೆ, ನಾನು ನಿವೃತ್ತಿ ಘೋಷಿಸಿದ್ದೇನೆ ಎಂದು ಕೆಲವು ಮಾಧ್ಯಮಗಳಲ್ಲಿ ತಪ್ಪಾಗಿ ವರದಿಯಾಗಿದೆ. ಇದು ನಿಜವಲ್ಲ' ಎಂದು  ಬಾಕ್ಸರ್ ಮೇರಿಕೋಮ್ ಸ್ಪಷ್ಟ ಪಡಿಸಿದ್ದಾರೆ.

ಆರು ಬಾರಿಯ ವಿಶ್ವ ಚಾಂಪಿಯನ್ ಮತ್ತು 2012ರ ಒಲಿಂಪಿಕ್ ಪದಕ ವಿಜೇತೆ ಹಾಗೂ ಸ್ಟಾರ್ ಇಂಡಿಯಾ ಬಾಕ್ಸರ್ ಮಾಂಗ್ಟೆ ಚುಂಗ್ನೈಜಾಂಗ್ ಮೇರಿ ಕೋಮ್ ಬಾಕ್ಸಿಂಗ್​ಗೆ ನಿವೃತ್ತಿ ಘೋಷಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು, ಈ ವರದಿ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಜನವರಿ 24ರಂದು ಅಸ್ಸಾಂನ ದಿಬ್ರುಗಢ ಸಮೀಪದ ಶಾಲೆಯೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ.

ಅಲ್ಲಿ ಮಕ್ಕಳನ್ನು ಉದ್ದೇಶಿಸಿ ಮಾತನಾಡುವಾಗ ‘ನನಗೆ ಇನ್ನೂ ಕ್ರೀಡೆಗಳಲ್ಲಿ ಸಾಧಿಸುವ ಹಸಿವು ಇದೆ. ಆದರೆ ಒಲಿಂಪಿಕ್ಸ್‌ನಲ್ಲಿ ವಯಸ್ಸಿನ ಮಿತಿಯು ಕಾರಣ ನನಗೆ ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂದು ನಾನು ಹೇಳಿದ್ದೆ. ಆದರೆ ನಿವೃತ್ತಿ ಘೋಷಣೆ ಮಾಡಿಲ್ಲ. ನಾನು ಇನ್ನೂ ನನ್ನ ಫಿಟ್ನೆಸ್ ಬಗ್ಗೆ ಗಮನಹರಿಸುತ್ತಿದ್ದೇನೆ. ನಿವೃತ್ತಿ ಘೋಷಿಸಿದಾಗ ನಾನು ಎಲ್ಲರಿಗೂ ತಿಳಿಸುತ್ತೇನೆ. ದಯವಿಟ್ಟು ಇದನ್ನು ಸರಿಪಡಿಸಿ ಎಂದೂ ಅವರು ಮನವಿ ಮಾಡಿದ್ದಾರೆ.

ಅಂತರರಾಷ್ಟ್ರೀಯ ಬಾಕ್ಸಿಂಗ್ ಅಸೋಸಿಯೇಷನ್ ​​(IBA) ನಿಯಮಗಳ ಪ್ರಕಾರ ಪುರುಷ ಮತ್ತು ಮಹಿಳಾ ಬಾಕ್ಸರ್​ಗಳು 40 ವರ್ಷ ವಯಸ್ಸಿನವರೆಗೆ ಮಾತ್ರ ಸ್ಪರ್ಧಿಸಲು ಅವಕಾಶ ನೀಡಲಾಗುತ್ತದೆ. ಹಾಗಾಗಿ ಅವರು ನಿವೃತ್ತಿ ಘೋಷಿಸಿದ್ದಾರೆ ಎಂದು ವರದಿಯಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com