National Games 2025: ಹಾಕಿಯಲ್ಲಿ ಚಿನ್ನ ಗೆದ್ದ ಕರ್ನಾಟಕ!

ಪಂದ್ಯ ಆರಂಭವಾಗುತ್ತಿದ್ದಂತೆ ಉತ್ತರ ಪ್ರದೇಶ ಪರ ಫರಾಜ್ ಖಾನ್ ಪೆನಾಲ್ಟಿ ಕಾರ್ನರ್ ಮೂಲಕ ಗೋಲು ತಂದುಕೊಟ್ಟರು.
Karnataka  men's hockey
ಕರ್ನಾಟಕ ಹಾಕಿ ತಂಡ
Updated on

ಹರಿದ್ವಾರ: ಕರ್ನಾಟಕ ಹಾಕಿ ತಂಡ ಗುರುವಾರ ನಡೆದ ಪುರುಷರ ವಿಭಾಗದ ಫೈನಲ್ ನಲ್ಲಿ ಉತ್ತರ ಪ್ರದೇಶದ ವಿರುದ್ಧ 3-2 ಗೋಲುಗಳ ಅಂತರದಿಂದ ಗೆದ್ದು ಚಿನ್ನದ ಪದಕವನ್ನು ಗೆದ್ದುಕೊಂಡಿದೆ.

ಪಂದ್ಯ ಆರಂಭವಾಗುತ್ತಿದ್ದಂತೆ ಉತ್ತರ ಪ್ರದೇಶ ಪರ ಫರಾಜ್ ಖಾನ್ ಪೆನಾಲ್ಟಿ ಕಾರ್ನರ್ ಮೂಲಕ ಗೋಲು ತಂದುಕೊಟ್ಟರು. ಎಂಟನೇ ನಿಮಿಷದಲ್ಲಿ ಕರ್ನಾಟಕದ ಶಮಂತ್ ಸಿ ಗೋಲು ಗಳಿಸುವುದರೊಂದಿಗೆ ಪಂದ್ಯ 1-1 ಸಮಬಲ ಸಾಧಿಸಿತು.

ಬಳಿಕ ಭರತ್ ಮಹಾಲಿಂಗಪ್ಪ ಕುರ್ತಕೋಟಿ (18ನೇ ನಿಮಿಷ) ಮತ್ತು ಅಭರಣ ಸುದೇವ್ (39ನೇ ನಿಮಿಷ) ಪೆನಾಲ್ಟಿ ಕಾರ್ನರ್‌ಗಳಲ್ಲಿ ಗೋಲು ಗಳಿಸಿ ಕರ್ನಾಟಕಕ್ಕೆ ಎರಡು ಗೋಲು ತಂದುಕೊಟ್ಟರು.

Karnataka  men's hockey
2036ರ ಒಲಿಂಪಿಕ್ಸ್ ಆಯೋಜನೆಗೆ ಭಾರತ ಶತಪ್ರಯತ್ನ: 38ನೇ ರಾಷ್ಟ್ರೀಯ ಕ್ರೀಡಾಕೂಟ ಉದ್ಘಾಟಿಸಿ ಪ್ರಧಾನಿ ಮೋದಿ ಹೇಳಿಕೆ

ಉತ್ತರ ಪ್ರದೇಶದ ಶಾರದಾ ನಂದ್ ತಿವಾರಿ 45ನೇ ನಿಮಿಷದಲ್ಲಿ ಸಿಕ್ಕ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಗೋಲಾಗಿ ಪರಿವರ್ತಿಸಿದರು. ಆದರೆ ಕೊನೆಯಲ್ಲಿ ಕರ್ನಾಟಕ 3-2 ಅಂತರದಿಂದ ಪಂದ್ಯವನ್ನು ಗೆದ್ದುಕೊಂಡಿತು. ಬುಧವಾರ ನಡೆದ ಸೆಮಿಫೈನಲ್ ನಲ್ಲಿ ಕರ್ನಾಟಕ ತಂಡ ಶೂಟೌಟ್ ನಲ್ಲಿ 5-4 ಗೋಲುಗಳ ಅಂತರದಿಂದ ಮಹಾರಾಷ್ಟ್ರ ವಿರುದ್ಧ ಗೆಲುವು ಸಾಧಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com