
ನವದೆಹಲಿ: ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ನಡುವಿನ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ದಂಪತಿಗಳು ಪರಸ್ಪರ ಬೇರ್ಪಡುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಸೈನಾ ನೆಹ್ವಾಲ್ ಅವರು ಈ ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಜೀವನವು ಕೆಲವೊಮ್ಮೆ ನಮ್ಮನ್ನು ವಿಭಿನ್ನ ದಿಕ್ಕುಗಳಲ್ಲಿ ಕರೆದೊಯ್ಯುತ್ತದೆ. ಸಾಕಷ್ಟು ಯೋಚನೆಯ ನಂತರ ನಾನು ಹಾಗೂ ಕಶ್ಯಪ್ ಪರುಪಳ್ಳಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಾವು ನಮಗಾಗಿ ಹಾಗೂ ಪರಸ್ಪರ ಶಾಂತಿ, ಬೆಳವಣಿಗೆ ಮತ್ತು ಗುಣಪಡಿಸುವಿಕೆಯನ್ನು ಆರಿಸಿಕೊಳ್ಳುತ್ತಿದ್ದೇವೆ . ಹಲವು ನೆನಪುಗಳಿಗೆ ನಾನು ಕೃತಜ್ಞನಾಗಿದ್ದೇನೆ ಮತ್ತು ಮುಂದುವರಿಯಲು ಉತ್ತಮವಾದದ್ದನ್ನು ಮಾತ್ರ ಬಯಸುತ್ತೇನೆ. ಈ ಸಮಯದಲ್ಲಿ ನಮ್ಮ ಗೌಪ್ಯತೆಯನ್ನು ಅರ್ಥಮಾಡಿಕೊಂಡಿದ್ದಕ್ಕಾಗಿ ಮತ್ತು ಗೌರವಿಸಿದ್ದಕ್ಕಾಗಿ ಧನ್ಯವಾದಗಳು ಎಂದು ಸೈನಾ ನೆಹ್ವಾಲ್ ಅವರು ಹೇಳಿದ್ದಾರೆ.
ಸೈನಾ ಅವರು ಬಹಿರಂಗವಾಗಿಯೇ ಈ ನಿರ್ಧಾರ ತಿಳಿಸಿದರೆ ಕಶ್ಯಪ್ ಅವರು ಇಲ್ಲಿಯವರೆಗೆ ಯಾವುದೇ ಹೇಳಿಕೆ, ಪೋಸ್ಟ್ ಹಾಕಿಕೊಂಡಿಲ್ಲ.
2018ರಲ್ಲಿ ಬ್ಯಾಡ್ಮಿಂಟನ್ ಆಟಗಾರನಾಗಿದ್ದ ಕಶ್ಯಪ್ ಅವರನ್ನು ಸೈನಾ ನೆಹ್ವಾಲ್ ಅವರು ವಿವಾಹವಾಗಿದ್ದರು. ಹ್ವಾಲ್ ಒಲಿಂಪಿಕ್ಸ್ ಕಂಚಿನ ಪದಕ ಮತ್ತು ವಿಶ್ವದ ನಂ. 1 ಶ್ರೇಯಾಂಕ ಪಡೆದಿದ್ದರೆ ಪರುಪಳ್ಳಿ ಕಶ್ಯಪ್ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆದಿದ್ದರು.
ಒಂದು ದಶಕಕ್ಕೂ ಹೆಚ್ಚು ಕಾಲ ಗೆಳೆಯರಾಗಿದ್ದ ಇವರು 2018 ರಲ್ಲಿ ಮದುವೆಯಾಗಿದ್ದರು. ಕ್ರೀಡೆಯಿಂದ ನಿವೃತ್ತರಾದ ನಂತರ ಕಶ್ಯಪ್ ಈಗ ತರಬೇತಿ ನೀಡುತ್ತಿದ್ದರೆ ಸೈನಾ ನೆಹ್ವಾಲ್ ಇನ್ನೂ ನಿವೃತ್ತಿ ಹೇಳಿಲ್ಲ.
Advertisement