

ಕರ್ನಾಟಕದ ಹೆಮ್ಮೆಯ ಪ್ಯಾರಾ ಈಜುಪಟು ಸ್ವಾತಿಕ್ ಪಾಟೀಲ್, ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಐಚಿ-ನಗೋಯಾ ಏಷ್ಯನ್ ಪ್ಯಾರಾ ಗೇಮ್ಸ್ (Asian Para Games 2026) ಕ್ರೀಡಾಕೂಟದ ಪುರುಷರ 100 ಮೀಟರ್ ಬ್ರೆಸ್ಟ್‌ಸ್ಟ್ರೋಕ್ SB9 ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಅವರು 1 ನಿಮಿಷ 13.77 ಸೆಕೆಂಡುಗಳಲ್ಲಿ ಗುರಿ ತಲುಪಿ ಈ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಅವರ ಈ ಸಾಧನೆಯು ಕರ್ನಾಟಕಕ್ಕೆ ಹಾಗೂ ಇಡೀ ರಾಷ್ಟ್ರಕ್ಕೆ ಅಪಾರ ಹೆಮ್ಮೆಯನ್ನು ತಂದಿದ್ದು, ಈ ಕ್ರೀಡಾಕೂಟದಲ್ಲಿ ಭಾರತದ ಸಾಧನೆಗಳ ಪಟ್ಟಿಗೆ ಮತ್ತೊಂದು ಮೈಲಿಗಲ್ಲನ್ನು ಸೇರಿಸಿದೆ.
ಇದೇ ಸ್ಪರ್ಧೆಯಲ್ಲಿ ಇರಾನ್‌ನ ಸಿನಾ ಝೇಘಮಿನೆಜಾದ್ ಚಿನ್ನದ ಪದಕ ಹಾಗೂ ಶಾಹಿನ್ ಇಜಾದ್ಯಾರ್ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.
ಕರ್ನಾಟಕದ ಬೆಳಗಾವಿ ಜಿಲ್ಲೆಯ ಮೂತಗಾ ಗ್ರಾಮದ ಸ್ವಾತಿಕ್ ಪಾಟೀಲ್, ಕೇವಲ ಮೂರು ತಿಂಗಳ ಹಿಂದೆ ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಗೇಮ್ಸ್‌ನ ಈಜು ಸ್ಪರ್ಧೆಯ ಫೈನಲ್‌ನಲ್ಲಿ 5ನೇ ಸ್ಥಾನ ಪಡೆದಿದ್ದರು. ಈ ಗಮನಾರ್ಹ ಸಾಧನೆಗಾಗಿ ಸ್ವಾತಿಕ್ ಅವರನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಭಿನಂದಿಸಿದ್ದಾರೆ.