ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಮೂರು ಬಾರಿ ಚಿನ್ನ ಗೆದ್ದಿದ್ದ ನೀರಜ್ ಯಾದವ್ ಕಾರಿನ ಬಳಿ ಶವವಾಗಿ ಪತ್ತೆ!

ಭಾರತದ ಪ್ಯಾರಾ-ಅಥ್ಲೆಟಿಕ್ಸ್ ತಂಡದ ಮುಖ್ಯ ತರಬೇತುದಾರ ಎಸ್. ಸತ್ಯನಾರಾಯಣ ಅವರು ಈ ಸಾವಿನ ಆಘಾತಕಾರಿ ಸುದ್ದಿಯನ್ನು ಖಚಿತಪಡಿಸಿದ್ದಾರೆ.
Three-time Asian Para Games gold medallist Neeraj Yadav found dead
ನೀರಜ್ ಯಾದವ್
Updated on: 

ನವದೆಹಲಿ: ಬಾಲ್ಯದಲ್ಲಿ ಪೋಲಿಯೊ ನಂತರ ಪಾರ್ಶ್ವವಾಯುವನ್ನು ಮೆಟ್ಟಿ ನಿಂತು, ಅಂತರರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಿದ್ದ ಹಾಗೂ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಮೂರು ಬಾರಿ ಚಿನ್ನದ ಪದಕ ಗೆದ್ದಿದ್ದ ನೀರಜ್ ಯಾದವ್(42) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಭಾರತದ ಪ್ಯಾರಾ-ಅಥ್ಲೆಟಿಕ್ಸ್ ತಂಡದ ಮುಖ್ಯ ತರಬೇತುದಾರ ಎಸ್. ಸತ್ಯನಾರಾಯಣ ಅವರು ಈ ಸಾವಿನ ಆಘಾತಕಾರಿ ಸುದ್ದಿಯನ್ನು ಖಚಿತಪಡಿಸಿದ್ದಾರೆ.

ವರದಿಗಳ ಪ್ರಕಾರ, ಮಂಗಳವಾರ ರಾತ್ರಿ ದೆಹಲಿಯಲ್ಲಿ ಯಾದವ್ ಅವರು ತಮ್ಮ ಕಾರಿನ ಬಳಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

Three-time Asian Para Games gold medallist Neeraj Yadav found dead
ನನಸಾದ ಕನಸು: ಏಷ್ಯನ್ ಪ್ಯಾರಾ ಗೇಮ್ಸ್‌ಗೆ ಪ್ಯಾರಾ ಈಜುಪಟು ನಿರಂಜನ್ ಮುಕುಂದ್ ಸಜ್ಜು!

ರಾಜಧಾನಿಯ ಆಸ್ಪತ್ರೆಯೊಂದರಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಅವರ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

"ನೀರಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಘಟನೆ ನಡೆದಿರುವುದು ಅತ್ಯಂತ ದುರದೃಷ್ಟಕರ," ಎಂದು ಸತ್ಯನಾರಾಯಣ ಅವರು ಹೇಳಿದ್ದಾಗಿ ಪಿಟಿಐ (PTI) ವರದಿ ಮಾಡಿದೆ. ಆದರೆ ಈ ದುರಂತಕ್ಕೆ ನಿಖರವಾದ ಕಾರಣವೇನು ಎಂಬುದರ ಕುರಿತು ತಾನು ಊಹೆ ಮಾಡಲು ಸಾಧ್ಯವಿಲ್ಲ ಎಂದು ತರಬೇತುದಾರ ಹೇಳಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಬಂದ ತಕ್ಷಣವೇ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿದೆ. ನೀರಜ್ ಯಾದವ್ ಅವರನ್ನು ದೆಹಲಿಯ ತೇಜ್ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆ ದಾಖಲಿಸುವ ಮುನ್ನವೇ ನೀರಜ್ ಯಾದವ್ ಮೃತಪಟ್ಟಿದ್ದರು. ಸಾವಿಗೆ ಕಾರಣ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

3 ಚಿನ್ನದ ಪದಕ

ನೀರಜ್ ಯಾದವ್ ಅವರು ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ F55 ಕ್ಯಾಟಗರಿಯಲ್ಲಿ ಚಿನ್ನದ ಪದಕ ಸಾಧನೆ ಮಾಡಿದ್ದಾರೆ. 2018ರ ಏಷ್ಯನ್ ಪ್ಯಾರ ಗೇಮ್ಸ್ ಜಾವಲಿನ್ ಥ್ರೋನಲ್ಲಿ ಚಿನ್ನದ ಪದಕ ಸಾಧನೆ ಮಾಡಿದ್ದರು. 2023ರ ಪ್ಯಾರಾ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ನೀರಜ್ ಯಾದವ್ ಜಾವಲಿನ್ ಹಾಗೂ ಡಿಸ್ಕಸ್ ಥ್ರೋ ಎರಡಲ್ಲೂ ಚಿನ್ನದ ಪದಕ ಗೆದ್ದುಕೊಂಡಿದ್ದರು. ಈ ಮೂಲಕ ಮೂರು ಚಿನ್ನದ ಪದಕ ಸಾಧನೆ ಮಾಡಿದ್ದರು. 2026ರ ಏಷ್ಯನ್ ಗೇಮ್ಸ್‌ನಲ್ಲೂ ಚಿನ್ನದ ಪದಕ ಗೆಲ್ಲೋ ವಿಶ್ವಾಸದಲ್ಲಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com