Olympics 2024: ಪದಕದ ಭರವಸೆ ಮೂಡಿಸಿದ್ದ ಭಾರತದ ಬ್ಯಾಡ್ಮಿಂಟನ್ ಜೋಡಿಗೆ ಸೋಲು!ಕಾಮನ್ವೆಲ್ತ್ ಗೇಮ್ಸ್ ಚಾಂಪಿಯನ್ ಮತ್ತು ವಿಶ್ವದ ಐದನೇ ಶ್ರೇಯಾಂಕದ ಜೋಡಿ ಸಾತ್ವಿಕ್ ಮತ್ತು ಚಿರಾಗ್ ಅವರು ವಿಶ್ವದ ಏಳನೇ ಶ್ರೇಯಾಂಕದ ಚಿಯಾ ಮತ್ತು ಸೋಹ್ ಜೋಡಿಯ ವಿರುದ್ಧ ಸೋಲು ಕಂಡಿದ್ದಾರೆ.
Paris Olympics 2024: ಹಾಕಿಯಲ್ಲಿ ಭಾರತಕ್ಕೆ ಮೊದಲ ಸೋಲು, ಗೆದ್ದು ಬೀಗಿದ ಬೆಲ್ಜಿಯಂ!18ನೇ ನಿಮಿಷದಲ್ಲಿ ಭಾರತದ ಪರ ಅಭಿಷೇಕ್ ಗೋಲು ಹೊಡೆದು ಮುನ್ನಡೆಗೆ ತಂದರು. ಆದರೆ, 33ನೇ ನಿಮಿಷದಲ್ಲಿ ಬೆಲ್ಜಿಯಂ ಪರ ತಿಬ್ಯು ಸ್ಟಾಕ್ ಬ್ರೋಕ್ಸ್ ಮತ್ತು 44ನೇ ನಿಮಿಷದಲ್ಲಿ ಜಾನ್-ಜಾನ್ ಡೊಹ್ಮೆನ್ ಗೋಲು ಗಳಿಸುವುದರೊಂದಿಗೆ ಬೆಲ್ಜಿಯಂ ಗೆಲುವು ಸಾಧಿಸಿತು.
Paris Olympics 2024: ಶೂಟಿಂಗ್ ನಲ್ಲಿ ಸ್ವಪ್ನಿಲ್ ಕುಸಾಲೆಗೆ ಕಂಚು, ಭಾರತಕ್ಕೆ 3ನೇ ಪದಕಪ್ಯಾರಿಸ್ ಒಲಿಂಪಿಕ್ಸ್ನ ಪುರುಷರ 50 ಮೀ ರೈಫಲ್ 3 ಸುತ್ತಿನಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. 8 ಮಂದಿ ಒಳಗೊಂಡಿದ್ದ ಫೈನಲ್ ಸುತ್ತಿನಲ್ಲಿ ಒಟ್ಟು 451.4 ಅಂಕಗಳನ್ನು ಕಲೆಹಾಕುವ ಮೂಲಕ ಭಾರತೀಯ ಶೂಟರ್ ಮೂರನೇ ಸ್ಥಾನ ಪಡೆದಿದ್ದಾರೆ.
Olympics 2024 5ನೇ ದಿನ: ಭಾರತೀಯ ಕ್ರೀಡಾಪಟುಗಳ ಮುನ್ನಡೆ; ಫೈನಲ್, ಪ್ರೀ ಕ್ವಾರ್ಟರ್, ಕ್ವಾರ್ಟರ್ ಫೈನಲ್ ಗೆ ಪ್ರವೇಶ!ಪ್ಯಾರಿಸ್ 2024ರ ಒಲಿಂಪಿಕ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು ಐದನೇ ದಿನವಾದ ಇಂದು ಹಲವು ಕ್ರೀಡಾಪಟುಗಳು ಮುಂದಿನ ಹಂತಕ್ಕೆ ತಲುಪಿದ್ದಾರೆ.
Olympics 2024 Hockey: ಐರ್ಲೆಂಡ್ ವಿರುದ್ಧ ಭಾರತಕ್ಕೆ 2-0 ಗೋಲು ಗೆಲುವು; ಪಟ್ಟಿಯಲ್ಲಿ ಅಗ್ರಸ್ಥಾನ!ಹರ್ಮನ್ಪ್ರೀತ್ ಸಿಂಗ್ ಎರಡು ಗೋಲು ಬಾರಿಸುವ ಮೂಲಕ ಭಾರತೀಯ ಪುರುಷರ ಹಾಕಿ ತಂಡ ಮಂಗಳವಾರ ಯವೆಸ್-ಡು-ಮನೋಯಿರ್ ಕ್ರೀಡಾಂಗಣದಲ್ಲಿ ಐರ್ಲೆಂಡ್ ತಂಡವನ್ನು 2-0 ಗೋಲು ಅಂತರದಿಂದ ಸೋಲಿಸಿತು.
Paris Olympics 2024: ಶೂಟಿಂಗ್ನಲ್ಲಿ ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಮನು ಭಾಕರ್-ಸರಬ್ಜೋತ್ ಸಿಂಗ್ ಜೋಡಿ2 ದಿನಗಳ ಹಿಂದಷ್ಟೇ ಮಹಿಳೆಯರ 10 ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದ ಮನು, ಇದೀಗ 2ನೇ ಪದಕ ಗೆಲ್ಲುವ ಮೂಲಕ ಒಂದೇ ಒಲಿಂಪಿಕ್ಸ್ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
Paris Olympics 2024: ಒಲಿಂಪಿಕ್ಸ್ ನಿರ್ಗಮನದ ಬೆನ್ನಲ್ಲೇ ಅಂತಾರಾಷ್ಟ್ರೀಯ ಟೆನಿಸ್ಗೆ ಕನ್ನಡಿಗ ರೋಹನ್ ಬೋಪಣ್ಣ ವಿದಾಯ!ಜುಲೈ 28ರ ಭಾನುವಾರ ನಡೆದ ಡಬಲ್ಸ್ ವಿಭಾಗದ ಆರಂಭಿಕ ಸುತ್ತಿನಲ್ಲಿ ಫ್ರೆಂಚ್ ಜೋಡಿ ಗೇಲ್ ಮೊನ್ಫಿಲ್ಸ್ ಮತ್ತು ಎಡ್ವರ್ಡ್ ರೋಜರ್-ವಾಸೆಲಿನ್ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿದ್ದರು.
Paris Olympics 2024: ಒಲಿಂಪಿಕ್ಸ್ ಗೆ ಮತ್ತೆ Covid ಭೀತಿ; ಬೆಳ್ಳಿ ಪದಕ ಗೆದ್ದ ಈಜು ಪಟುವಿಗೆ ಸೋಂಕು!ಒಲಿಂಪಿಕ್ ಕ್ರೀಡಾಕೂಟದಲ್ಲಿ (Paris Olympics 2024) 100 ಮೀಟರ್ ಬ್ರೆಸ್ಟ್ಸ್ಟ್ರೋಕ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ಗೆದ್ದಿರುವ ಬ್ರಿಟಿಷ್ ಈಜುಗಾರ ಆಡಮ್ ಪೀಟಿ ಅವರಿಗೆ ಕೋವಿಡ್ ಸೋಂಕು ತಗುಲಿದೆ.
Paris Olympics 2024: ಇತಿಹಾಸ ಬರೆದ ಸಾತ್ವಿಕ್- ಚಿರಾಗ್, ಒಲಿಂಪಿಕ್ಸ್ ಕ್ವಾರ್ಟರ್ ಫೈನಲ್ಗೇರಿದ ಭಾರತದ ಡಬಲ್ಸ್ ಜೋಡಿ!ಭಾರತದ ಪುರುಷರ ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ (Paris Olympics 2024) ಕ್ವಾರ್ಟರ್ ಫೈನಲ್ಸ್ ತಲುಪಿದ್ದಾರೆ.
Paris Olympics 2024: ಭಾರತಕ್ಕೆ ಶೂಟಿಂಗ್ನಲ್ಲಿ ಕಂಚಿನ ಪದಕ ಮಿಸ್; ಮತ್ತೊಂದು ಪದಕದ ಮೇಲೆ ಮನು ಭಾಕರ್ ಕಣ್ಣು!ಪುರುಷರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಅರ್ಜುನ್ ಬಬುಟಾ 4ನೇ ಸ್ಥಾನ ಪಡೆಯುವದೊಂದಿಗೆ ಕೂದಲೆಳೆ ಅಂತರದಲ್ಲಿ ಪದಕ ಮಿಸ್ ಮಾಡಿಕೊಂಡಿದ್ದಾರೆ.
ಮನು ಭಾಕರ್ ತರಬೇತಿಗಾಗಿ ಸರ್ಕಾರದಿಂದ 2 ಕೋಟಿ ರೂಪಾಯಿ ಖರ್ಚು: ಕ್ರೀಡಾ ಸಚಿವಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಐತಿಹಾಸಿಕ ಕಂಚಿನ ಪದಕ ಗೆದ್ದ ಶೂಟರ್ ಮನು ಭಾಕರ್ ಅವರನ್ನು ಶ್ಲಾಘಿಸಿದ ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅವರು, ಭಾಕರ್ ಅವರ ತರಬೇತಿಗಾಗಿ ಸುಮಾರು 2 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂಬ ಮಾಹಿತಿಯನ್ನು ಬಹಿರಂಗಪಡಿಸಿದರು.
Paris Olympics 2024: ಬ್ಯಾಡ್ಮಿಂಟನ್ ನಲ್ಲಿ ಭಾರತದ HS ಪ್ರಣಯ್ ಶುಭಾರಂಭಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಭಾರತದ HS ಪ್ರಣಯ್ ಶುಭಾರಂಭ ಮಾಡಿದ್ದಾರೆ.
Olympics 2024: ಭಾರತದ ಮೊದಲ ಪದಕ ಬೇಟೆ: ಏರ್ ಪಿಸ್ತೂಲ್ ನಲ್ಲಿ ಪದಕ ಗೆದ್ದ ಮೊದಲ ಭಾರತೀಯೆ ಮನು ಭಾಕರ್!ಒಲಿಂಪಿಕ್ಸ್ 2024ರ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಬಂದಿದ್ದು ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾರೆ.
Paris Olympics 2024: ಬ್ಯಾಡ್ಮಿಂಟನ್ ಸಿಂಗಲ್ಸ್ನಲ್ಲಿ ಪಿವಿ ಸಿಂಧು ಶುಭಾರಂಭ!ಮೂರನೇ ಒಲಂಪಿಕ್ ಪದಕಕ್ಕಾಗಿ ಪೈಪೋಟಿ ನಡೆಸುತ್ತಿರುವ ಸಿಂಧು ಮೊದಲ ಗುಂಪಿನ ಎಂ ಪಂದ್ಯದಲ್ಲಿ ಕೇವಲ 29 ನಿಮಿಷದಲ್ಲಿ 21-9 21-6 ರಲ್ಲಿ ಅಂತರದಲ್ಲಿ ತನ್ನಗಿಂತಲೂ ಕೆಳ ಶ್ರೇಯಾಂಕದ ಎದುರಾಳಿಯನ್ನು ಸೋಲಿಸಿದರು.
Paris Olympics 2024: ಹಾಕಿ ಗ್ರೂಪ್ ಸ್ಟೇಜ್ ನಲ್ಲಿ ಭಾರತ ಶುಭಾರಂಭ; ಪ್ರಬಲ ನ್ಯೂಜಿಲೆಂಡ್ ವಿರುದ್ಧ 3-2 ವಿರೋಚಿತ ಜಯ!ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡ ಶುಭಾರಂಭ ಮಾಡಿದ್ದು, ಪ್ರಬಲ ನ್ಯೂಜಿಲೆಂಡ್ ವಿರುದ್ಧ 3-2 ಗೋಲುಗಳ ಅಂತರದಲ್ಲಿ ವಿರೋಚಿತ ಗೆಲುವು ಸಾಧಿಸಿದೆ.