ಹನಿ ಹನಿ
ಸ್ತಬ್ಧ ಭಾವಗಳು
1. ಮುಂಜಾನೆ ಚಳಿಗದುರಿ ಮೌನವಾಗಿ
ಮಲಗಿದ ರಸ್ತೆ
ಪೇಪರ್ ಮಾರುವ ಹುಡುಗ ನಡುಗಿ
ಹಂಚಿದ್ದಾನೆ ತನ್ನ ವ್ಯಥೆ
2. ಮೈ ಕೊರೆವ ಚಳಿಗೆ ಕಂಬಳಿ
ಎಳೆದುಕೊಂಡಿತು ಅಜ್ಜ
ಮನಸ್ಸು ಮುದುಡಿದೆ, ಹೇಳಲು
ಪದಗಳಿಲ್ಲ, ನಡುಗುವ ಸಜ
3. ಆ ಏಕಮುಖ ಸಂಚಾರದ ದಾರಿಯಲ್ಲಿ
ಮಗುವಿನೊಂದಿಗೆ ತಾಯಿ
ಮುಂದೆ ಹೋದವಳು ಹಿಂದೆ ಬರಳು
ಬೊಗಳಿದೆ ಬೀದಿನಾಯಿ
4. ಬಸ್ ನಿಲ್ದಾಣದಲ್ಲಿ ಮಲಗಿದ್ದವನಿಗೆ
ಸುರ್ಯೋದಯದ ತವಕ
ದೊಣ್ಣೆಯೇಟಿಗೂ ಏಳಲಿಲ್ಲ
ತೀರುತ್ತಿಲ್ಲ ಮೈ ಕೈ ನಡುಕ
5. ಚಳಿ ಮುಗಿದು ಬಿಸಿಲು ನೆತ್ತಿ ಸುಟ್ಟರೂ
ಇವರುಗಳು ಮೌನಿಗಳು
ಹೇಳಿಕೊಳ್ಳಲು ಪದಭಂಡಾರವಿಲ್ಲ
ಕಣ್ಣಿಲ್ಲದಂಧ ಕವಿಗಳು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

