ಬೈಟುಕಾಫಿ

ಸಮರ್ಥನಂಗೆ ಮತ್ತೊಂದು ಗರಿ

ಸಮರ್ಥನಂಗೆ ಮತ್ತೊಂದು ಗರಿ
Published On :

ಸಮರ್ಥನಂ ಟ್ರಸ್ಟ್ ಫಾರ್ ಡಿಸೇಬಲ್ಡ್ ಸಂಸ್ಥೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರ್ಪಡೆಗೊಂಡಿದೆ. ಕ್ರಿಕೆಟ್ ಅಸೋಸಿಯೇಷನ್ ಆಫ್ ಬ್ಲೈಂಡ್ ಇನ್ ಇಂಡಿಯಾ ಮತ್ತು ಬೆಂಗಳೂರಿನ ಸಮರ್ಥನಂ ಜಂಟಿಯಾಗಿ  ಕಳೆದ ಡಿಸೆಂಬರ್‌ನಲ್ಲಿ  ಅಂಧರ ಟಿ-20 ವಿಶ್ವಕಪ್ ಸಂಘಟಿಸಿದ್ದವು. ಸಮರ್ಥನಂ ಈ ಸಾಧನೆಗೆ ಪಿಎಂಐ ಎನ್‌ಜಿಒ ವಿಭಾಗದಲ್ಲಿ ಅತ್ಯುತ್ತಮ ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್‌ಗಾಗಿ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದೆ.
ಈ ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ವೆಸ್ಟ್‌ಇಂಡೀಸ್, ಶ್ರೀಲಂಕಾ, ನೇಪಾಳ,  ಭಾರತ ತಂಡಗಳು ಪಾಲ್ಗೊಂಡಿದ್ದವು. ಭಾರತ  ಚಾಂಪಿಯನ್ ಆಗಿ ಹೊರಹೊಮ್ಮಿತು.
ಪಿಎಂಐ ನಾನ್ ಪ್ರಾಫಿಟ್ ಮೆಂಬರ್‌ಶಿಪ್ ಮ್ಯಾನೇಜ್‌ಮೆಂಟ್ ವಿಭಾಗದಲ್ಲೇ ವಿಶ್ವಶ್ರೇಷ್ಠವಾದದ್ದು. 2009ರಿಂದ ಪಿಎಂಐ ಭಾರತದಲ್ಲಿರುವ ಎನ್‌ಜಿಒಗಳ ಸಾಧನೆ ಮತ್ತು ಕೊಡುಗೆಗಳನ್ನು ಗಮನಿಸಿ ಪ್ರಶಸ್ತಿ ನೀಡುತ್ತಾ ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.