ಏನು ಜೀವನದರ್ಥ? ಏನು ಪ್ರಪಂಚಾರ್ಥ?
ಏನು ಜೀವಪ್ರಪಂಚಗಳ ಸಂಬಂಧ?॥
ಕಾಣದಿಲ್ಲಿರ್ಪುದೇನಾನುಮುಂಟೆ? ಅದೇನು?॥
ಜ್ಞಾನ ಪ್ರಮಾಣವೇಂ? - ಮಂಕುತಿಮ್ಮ॥
(ಈ ನಮ್ಮ ಜೀವನಕ್ಕೆ ಏನಾದರೂ ಅರ್ಥವಿದೆಯೇ? ಈ ಪ್ರಪಂಚಕ್ಕೆ ಏನಾದರೂ ಅರ್ಥ ಇದೆಯೇ? ಈ ಜೀವಿಗಳ ಮತ್ತು ಪ್ರಪಂಚಗಳ ಸಂಬಂಧವೇನು? ನಮಗೆ ಗೋಚರವಾಗದೆ ಇರುವುದು ಇಲ್ಲಿ ಏನಾದರೂ ಇದೆಯೇ? ಹಾಗಿದ್ದರೆ ಏನದು? ಅದು ನಮ್ಮ ಜ್ಞಾನಶಕ್ತಿಗೆ ಮೀರಿದ್ದುದೋ? ಏನು?)