ಕ್ರಮವೊಂದು ಲಕ್ಷ್ಯವೊಂದುಂಟೇನು ಸೃಷ್ಟಿಯಲಿ?
ಭ್ರಮಿಪುದೇನಾಗಾಗ ಕರ್ತೃವಿನ ಮನಸು? ॥
ಮಮತೆಯುಳ್ಳವನಾತನಾದೊಡೀ ಜೀವಗಳು
ಶ್ರಮಪಡುವುವೇಕಿಂತು? - ಮಂಕುತಿಮ್ಮ ॥
(ಈ ಭಗವಂತನ ಸೃಷ್ಟಿಯಲ್ಲಿ ಒಂದು ಕ್ರಮ ಮತ್ತು ಗುರಿ ಏನಾದರೂ ಇದೆಯೇ? ಈ ಸೃಷ್ಟಿಕರ್ತನ ಮನಸ್ಸು, ಆಗಾಗ ಎಲ್ಲೆಲ್ಲೊ ಹರಿದಾಡುತ್ತದೇನು? ತಾನು ಸೃಷ್ಟಿಸಿದ ಜೀವಿಗಳ ಮೇಲೆ ಅವನಿಗೆ ಪ್ರೀತಿ ಮತ್ತು ವಾತ್ಸಲ್ಯಗಳಿರುವುದಾದರೆ ಈ ಜೀವಿಗಳು ಏತಕ್ಕಾಗಿ ಈ ರೀತಿ ಕಷ್ಟಗಳನ್ನು ಅನುಭವಿಸುತ್ತಿವೆ?)