ಪ್ರಧಾನ ಸುದ್ದಿ

ರಾಜಿನಾಮೆ ಸೆಡ್ಡು

ರಾಜಿನಾಮೆ ಸೆಡ್ಡು
Published On :

ನವದೆಹಲಿ/ಹೈದರಾಬಾದ್: ತೆಲಂಗಾಣ ರಾಜ್ಯ ಘೋಷಣೆ ಮಾಡಿದ ಕಾಂಗ್ರೆಸ್ ವಿರುದ್ಧ ಪ್ರತಿದಿನವೂ ಇರಿಸು ಮುರಿಸಿನ ಬೆಳವಣಿಗೆಯಾಗುತ್ತಿದೆ. ಆಂಧ್ರಪ್ರದೇಶ ವಿಭಜನೆ ವಿರೋಧಿಸಿ ಶುಕ್ರವಾರ ರಾಯಲಸೀಮಾ ಪ್ರದೇಶದ ಏಳು ಮಂದಿ ಕಾಂಗ್ರೆಸ್ ಸಂಸದರು ರಾಜಿನಾಮೆ ನೀಡಿದ್ದಾರೆ. ಜತೆಗೆ 7 ಕಾಂಗ್ರೆಸ್ ಶಾಸಕರೂ ಪದತ್ಯಾಗ ಮಾಡಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಸಂಸದರು ಪದತ್ಯಾಗ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಹೈದರಾಬಾದ್‌ನಲ್ಲಿಯೂ ಕೂಡ ಕಿರಣ್‌ಕುಮಾರ್ ರೆಡ್ಡಿ ಸಚಿವ ಸಂಪುಟಕ್ಕೆ ಮತ್ತೊಬ್ಬ ಸಚಿವರು ರಾಜಿನಾಮೆ ನೀಡಿದ್ದಾರೆ.  ಇದರಿಂದಾಗಿ ಪದತ್ಯಾಗ ಮಾಡಿದ ಸಚಿವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಹೊಸ ರಾಜ್ಯ  ರಚನೆ ನಿರ್ಧಾರ ಖಂಡಿಸಿ ರಾಜಿನಾಮೆ ನೀಡಿದ ಶಾಸಕರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.
  ತೆಲಂಗಾಣ ರಾಜ್ಯಕ್ಕೆ ವಿರೋಧ ವ್ಯಕ್ತಪಡಿಸಿ ರಾಜಿನಾಮೆ ಬೆದರಿಕೆ ಹಾಕಿದ್ದ ಆಂಧ್ರವನ್ನು ಪ್ರತಿನಿಧಿಸುವ ನಾಲ್ವರು ಕೇಂದ್ರ ಸಚಿವರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಪಲ್ಲಂರಾಜು, ಪುರಂದೇಶ್ವರಿ, ಜೆ.ಡಿ.ಸಲೀಂ ಮತ್ತು ಕಿಲ್ಲಿ ಕೃಪಾರಾಣಿ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಭೇಟಿ ಬಳಿಕ ತಮ್ಮ ನಿರ್ಧಾರ ಬದಲಿಸಲು ಒಪ್ಪಿಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.