ಪೊಲೀಸ್ ಹುದ್ದೆ ಭರ್ತಿಗೆ ಹಣಕಾಸು ಇಲಾಖೆ ಅನುಮತಿ ಕೋರಿಕೆ
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 8,501 ಪೇದೆಗಳು ಹಾಗೂ 816 ಸಬ್ ಇನ್ಸ್ಪೆಕ್ಟರ್ ಹುದ್ದೆ ಭರ್ತಿಗೆ ಹಣಕಾಸು ಇಲಾಖೆಯ ಅನುಮತಿ ಕೋರಲಾಗಿದೆ ಎಂದು ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಸಾಮೂಹಿಕ ಅತ್ಯಾಚಾರ ಪ್ರಕರಣಗಳ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಡಿ.ಎಚ್. ವಘೇಲ ಹಾಗೂ ನ್ಯಾ.ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ಪೀಠ, ಹುದ್ದೆಯ ನೇಮಕ ಪ್ರಕ್ರಿಯೆ ಕುರಿತು ಪರಿಷ್ಕೃತ ಮಾಹಿತಿ ನೀಡುವಂತೆ ಆದೇಶಿಸಿದೆ.
ಇಲಾಖೆಯಲ್ಲಿ 61,711 ಪೊಲೀಸ್ ಪೇದೆಯ ಹುದ್ದೆಗಳಿದ್ದು, ಅದರಲ್ಲಿ 14,699 ಖಾಲಿ ಇವೆ. ಅದರಲ್ಲಿ 8,501 ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ಆರಂಭಿಸಲು ಹಣಕಾಸು ಇಲಾಖೆ ಅನುಮತಿ ಕಲ್ಪಿಸಿದೆ. 8,390 ಸಬ್ ಇನ್ಸ್ಪೆಕ್ಟರ್ ಹುದ್ದೆಗಳಲ್ಲಿ 1,301 ಖಾಲಿ ಇದ್ದು, 816 ಹುದ್ದೆಗಳ ಭರ್ತಿಗೆ ಅನುಮತಿ ಕೇಳಲಾಗಿದೆ ಎಂದು ಸರ್ಕಾರಿ ವಕೀಲರು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು. ರಾತ್ರಿ ವೇಳೆ ಮಹಿಳೆಯರ ಸುರಕ್ಷತೆಗೆ ಗಸ್ತು ಪೊಲೀಸರನ್ನು ಹೆಚ್ಚಿಸಬೇಕೆಂದು ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

