ಕಾಫಿ, ತಂಬಾಕು ಬೆಳೆಗಾರರ ನೆರವಿಗೆ ಸಂಸದರ ಮನವಿ
ಕನ್ನಡಪ್ರಭ ಪ್ರತಿನಿಧಿಯಿಂದ
ನವದೆಹಲಿ: ಸಂಕಷ್ಟದಲ್ಲಿರುವ ಕಾಫಿ ಮತ್ತು ತಂಬಾಕು ಬೆಳೆಗಾರರ ಸಹಾಯಕ್ಕೆ ಬರುವಂತೆ ಕರ್ನಾಟಕದ ಮೂವರು ಸಂಸದರು ಕೇಂದ್ರಕ್ಕೆ ಮನವಿ ಮಾಡಿದ್ದಾರೆ.
ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಪ್ರಮುಖ ಬೆಳೆಯಾಗಿರುವ ಕಾಫಿಯನ್ನು ರಾಷ್ಟ್ರೀಯ ಪಾನೀಯವೆಂದು ಘೋಷಿಸಬೇಕು. ರೈತರು ಬೆಳೆದಿರುವ ತಂಬಾಕನ್ನು ಸರ್ಕಾರವೇ ನೇರವಾಗಿ ಖರೀದಿಸಬೇಕು ಎಂಬುದು ಸಂಸದರಾದ ಎಚ್. ವಿಶ್ವನಾಥ್, ಜಯಪ್ರಕಾಶ್ ಹೆಗ್ಡೆ ಮತ್ತು ಧ್ರುವನಾರಾಯಣ್ ಅವರ ಮನವಿ.
ಮಂಗಳವಾರ ವಾಣಿಜ್ಯ ಸಚಿವ ಆನಂದ್ ಶರ್ಮಾರನ್ನು ಭೇಟಿ ಮಾಡಿ, ಬೆಳೆಗಾರರು ಬೆಳೆಗಾರರ ಸಂಕಷ್ಟಗಳನ್ನು ಸಂಸದರು ವಿವರಿಸಿದರು. ಕಾಫಿಯನ್ನು ರಾಷ್ಟ್ರೀಯ ಪಾನೀಯ ಎಂದು ಘೋಷಣೆ ಮಾಡಿದರೆ ರಕ್ಷಣಾ ಇಲಾಖೆಯ ಉಪಯೋಗಕ್ಕೆ ಕಾಫಿ ಬಳಕೆಯಾಗಲಿದ್ದು, ಇದರಿಂದ ಕಾಫಿಗಿರುವ ಬೇಡಿಕೆ ಹೆಚ್ಚಾಗಿ ಬೆಳೆಗಾರರಿಗೆ ಸೂಕ್ತ ಬೆಲೆ ಸಿಗಲಿದೆ ಎಂದೂ ಸಚಿವರಿಗೆ ವಿವರಿಸಿದ್ದಾರೆ. ಮಧ್ಯಮ ಮತ್ತು ದೊಡ್ಡ ಬೆಳೆಗಾರರ ಸಾಲದ ಬಡ್ಡಿ ಮನ್ನಾ ಮಾಡಬೇಕು ಹಾಗು ಕಾಫಿ ಮಂಡಳಿಗೆ ಸದಸ್ಯರ ನೇಮಕ ಮಾಡಬೇಕು ಎಂಬ ಬೇಡಿಕೆಯನ್ನೂ ಇಟ್ಟಿದ್ದಾರೆ.
ತಂಬಾಕು ಬೆಳೆಗಾರರು ಬೆಳೆದಿರುವ ಎಲ್ಲ ತಂಬಾಕನ್ನು ಸರ್ಕಾರವೇ ಖರೀದಿ ಮಾಡಬೇಕು ಹಾಗೂ ತಂಬಾಕಿಗೆ ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿರುವ ಬೆಲೆ ವ್ಯತ್ಯಾಸವನ್ನು ಸರಿಪಡಿಸಬೇಕು ಎಂದು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

