ಪ್ರಧಾನ ಸುದ್ದಿ

ಕೈಗೆ ಯೋಗಿ ಬೆಂಬಲ

Published On :


ಕ.ಪ್ರ.ವಾರ್ತೆ   ಬೆಂಗಳೂರು   ಆ. 15
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಶಾಸಕ ಸಿ.ಪಿ. ಯೋಗೇಶ್ವರ್ ಅವರು ಕಾಂಗ್ರೆಸ್‌ಗೆ ಷರತ್ತುಬದ್ಧ ಬೆಂಬಲ ಘೋಷಿಸುವದರೊಂದಿಗೆ ಚುನಾವಣಾ ಕಣ ಹೊಸ ತಿರುವು ಪಡೆದುಕೊಂಡಿದೆ.
ಗುರುವಾರ ಯೋಗೇಶ್ವರ ತಮ್ಮ ನಿಲುವು ಪ್ರಕಟಿಸಿದ್ದಾರೆ. ಈ ಚುನಾವಣೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಬಲ ಬಂದಂತಾಗಿದೆ. ಈ ಸಂಬಂಧ ಕನ್ನಡಪ್ರಭದ ಜತೆ ಮಾತನಾಡಿದ ಯೋಗೇಶ್ವರ, 'ನಾನು ಡಿ.ಕೆ.ಶಿವಕುಮಾರ್ ಅವರ ಪರವಾಗಿ ಬೆಂಬಲ ನೀಡುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ನಿಲ್ಲುವಂತೆ ಕ್ಷೇತ್ರದ ಮತದಾರರು ವ್ಯಕ್ತಪಡಿಸಿದ ಆಶಯಕ್ಕೆ ಬೆಂಬಲ ನೀಡಿದ್ದೇನೆ ಎಂದರು. ನಾನು ಈ ಚುನಾವಣೆಯಲ್ಲಿ ಯಾವುದಾದರೊಂದು ಪಕ್ಷದ ಪರ ನಿಲ್ಲಲೇಬೇಕಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನನ್ನ ಜತೆ ಚರ್ಚೆ ನಡೆಸಿದ್ದರು. ಮಾತ್ರವಲ್ಲ ಕ್ಷೇತ್ರದ ಅಭಿವೃದ್ಧಿಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಅವರ ಜತೆ ನಿಂತಿದ್ದೇನೆ ಎಂದು ಹೇಳಿದರು.
ನನ್ನ ಮುಂದೆ ಕೆಲವು ಯೋಜನೆಗಳಿವೆ. ಅವುಗಳನ್ನು ಅನುಷ್ಠಾನಗೊಳಿಸಲು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದರು. ನಾವು ಉಪಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿರಬಹುದು, ಆದರೆ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕೆ ಇಳಿಸುತ್ತೇವೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.