ಉಪ ಕದನ ನೀರಸ ಮತ

ರಾಮನಗರ/ಮಂಡ್ಯ: ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭೆ ಉಪ ಚುನಾವಣೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಸಣ್ಣ ಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿ ಮತದಾನ ಶಾಂತಿಯುವಾಗಿ ನಡೆದಿದೆ. ಮಂಡ್ಯ ಕ್ಷೇತ್ರದಲ್ಲಿ ಶೇ.58.51, ಬೆಂಗಳೂರು ಗ್ರಾಮಾಂತರದಲ್ಲಿ ಶೇ.56ರಷ್ಟು ಮತದಾನವಾಗಿದೆ. ಬೆಳಗ್ಗೆ ಮತದಾನ ಪ್ರಕ್ರಿಯೆ ಆರಂಭಗೊಂಡಾಗ ಉಭಯ ಕ್ಷೇತ್ರಗಳಲ್ಲೂ ಗ್ರಾಮೀಣ ಪ್ರದೇಶದ ಕೆಲ ಮತಗಟ್ಟೆಗಳಲ್ಲಷ್ಟೇ ಮತದಾರರು ಉತ್ಸಾಹದಿಂದ ಮತ ಹಾಕಿದರು.
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ 1972ರಲ್ಲಿ ನಡೆದ ಲೋಕಸಭೆ ಉಪಚುನಾವಣೆಯಲ್ಲಿ ಶೇ.39.2ರಷ್ಟು ಮತದಾನವಾಗಿತ್ತು. ಅದನ್ನು ಹೊರತುಪಡಿಸಿದರೆ ಈ ಬಾರಿ ಶೇ.58.51ರಷ್ಟು ಮತದಾನವಾಗಿದ್ದು ಎರಡನೇ ಬಾರಿ ಅತಿ ಕಡಿಮೆ ಹಕ್ಕು ಚಲಾವಣೆಯಾಗಿದೆ. ಮಂಡ್ಯದಲ್ಲಿ ಎಸ್.ಎಂ.ಕೃಷ್ಣ, ಅಂಬರೀಷ್ ಮತ ಚಲಾಯಿಸಿದರೆ, ಗ್ರಾಮಾಂತರ ಕ್ಷೇತ್ರದಲ್ಲಿ ಕುಮಾರಸ್ವಾಮಿ ದಂಪತಿ, ಡಿ.ಕೆ.ಶಿವಕುಮಾರ್, ಅಭ್ಯರ್ಥಿ ಡಿ.ಕೆ.ಸುರೇಶ್ ಮತದಾನ ಮಾಡಿದರು. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರೂ ಬೆಂಗಳೂರಿನಲ್ಲಿ ಮತ ಹಕ್ಕು ಇದ್ದಿದ್ದರಿಂದ ರಮ್ಯಾಗೆ ಮತ ಹಾಕುವ ಅವಕಾಶ ದೊರೆಯಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


