ಭೀಕರ ಅಪಘಾತ: ಇಬ್ಬರು ಮಕ್ಕಳು ಸೇರಿ 7 ಜನ ಸಾವು
ಕನ್ನಡಪ್ರಭ ವಾರ್ತೆ, ಕೋಲಾರ, ಆ.26-
ನಿಂತಿದ್ದ ಲಾರಿಗೆ ಟೆಂಪೋ(ಟಾಟಾ 407) ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಏಳು ಜನರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ತಾಲೂಕಿನ ಲಕ್ಷ್ಮೀಸಾಗರ ಗೇಟ್ ಬಳಿ ಸೋಮವಾರ ಸಂಜೆ ನಡೆದಿದೆ.
ಮೃತಪಟ್ಟವರು ತಾಲೂಕಿನ ಕಲ್ವಮಂಜಲಿ ಹಾಗೂ ಉದ್ಪಪ್ಪನಹಳ್ಳಿಯವರು. ಇವರು ನಿಶ್ಚಿತಾರ್ಥಕ್ಕಾಗಿ ಹೊಸಕೋಟೆ ತಾಲೂಕಿನ ಗೇರಹಳ್ಳಿಗೆ ಹೋಗಿ ವಾಪಸ್ ಬರುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಮೃತಪಟ್ಟವರನ್ನು ಮುನಿಯಪ್ಪ, ನರಸಮ್ಮ, ವೆಂಕಟಮ್ಮ, ಅಂಬಿಕಾ, ಮೈತ್ರಿ, ಮುನೇಂದ್ರ ಹಾಗೂ ರಾಜು ಎಂದು ಗುರುತಿಸಲಾಗಿದೆ.
ಟಾಟಾ 407 ವಾಹನದ ಚಾಲಕನ ಅಜಾಗರುಕತೆಯಿಂದಾಗಿ ಅಪಘಾತ ನಡೆದಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಪೊಲೀಸರಿಗೆ ತಿಳಿಸಿದ್ದಾರೆ. ವಾಹನದಲ್ಲಿ ಒಟ್ಟು 22 ಮಂದಿ ಪ್ರಯಾಣಿಸುತ್ತಿದ್ದರು. ರಸ್ತೆ ಬದಿ ನಿಂತಿದ್ದ ಲಾರಿಗೆ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದರಿಂದ ಟಾಟಾ 407 ವಾಹನ ಪೂರ್ಣವಾಗಿ ಜಖಂಗೊಂಡಿದೆ. ಮದುವೆ ಆಗಬೇಕಾಗಿರುವ ಹುಡುಗ ಹನುಮಂತರಾಜು ಸೇರಿದಂತೆ ಇನ್ನಿತರರು ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ದಾಖಲು ಆಗಿದ್ದಾರೆ. ಈ ಅಪಘಾತದಿಂದಾಗಿ ಸಂಚಾರ ಅಸ್ತವ್ಯಸ್ಥಗೊಂಡಿತ್ತು. ಎಸ್ಪಿ ಡಾ. ರಾಮನಿವಾಸ್ ಸಫಟ್, ಡಿವೈಎಸ್ಪಿ ಶ್ರೀಹರಿ ಬರಗೂರು, ವೇಮಗಲ್ ಎಸ್ಐ ದೇವೇಂದ್ರಪ್ಪ ಭೇಟಿ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

