ಪ್ರಧಾನ ಸುದ್ದಿ

ರಾಜ್ಯಕ್ಕೆ ಯಾಸೀನ್ ಕರೆತರಲಾಗುವುದು: ಗೃಹ ಸಚಿವ ಕೆ.ಜೆ. ಜಾರ್ಜ್

Published On :

ಬಳ್ಳಾರಿ: ರಾಜ್ಯದಲ್ಲಿ ನಡೆದಿರುವ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಬಂಧಿತ ಉಗ್ರ ಯಾಸೀನ್ ಭಟ್ಕಳ್‌ನನ್ನು ವಿಚಾರಣೆ ನಡೆಸಲು ರಾಜ್ಯಕ್ಕೆ ಕರೆತರಲಾಗುವುದು ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಳ್ಳಾರಿಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ,  ಯಾಸೀನ್ ನಮ್ಮ ರಾಜ್ಯಕ್ಕಲ್ಲದೆ ಮುಂಬೈ, ದೆಹಲಿ ಸೇರಿದಂತೆ ಇತರೆಡೆಗಳಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಿದ್ದು, ಹಲವು ರಾಜ್ಯಗಳಿಗೆ ಬೇಕಾಗಿದ್ದಾನೆ. ಈಗಾಗಲೇ ರಾಜ್ಯಕ್ಕೆ ಕರೆತರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ. ಸೆರೆ ಹಿಡಿದಿರುವ ಉಗ್ರನನ್ನು ರಾಷ್ಟ್ರೀಯ ಭದ್ರತಾ ದಳದವರು ತನಿಖೆಗೊಳಪಡಿಸಿದ್ದು, ಆತನಿಂದ ಸಂಪೂರ್ಣ ಮಾಹಿತಿ ಕಲೆಹಾಕುತ್ತಿದ್ದಾರೆ. ಯಾಸೀನ್ ನಮ್ಮ ರಾಜ್ಯದವನಾಗಿದ್ದರಿಂದ ಆತನ ಸಹಚರರು ಇರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಪೊಲೀಸರು ಎಚ್ಚರ ವಹಿಸಿದ್ದಾರೆ ಎಂದರು.
ನಕ್ಸಲರು ಸರ್ಕಾರದೊಂದಿಗೆ ಮಾತುಕತೆಗೆ ಬಂದರೆ ಸ್ವಾಗತ. ಆದರೆ ಕಾಡಿನೊಳಗೆ ಬುಡಕಟ್ಟು ಜನಾಂಗಗಳಿಗೆ ಏನಾದರೂ ತೊಂದರೆಯಾದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
10 ಕಡೆ ಶೀಘ್ರಗತಿ ನ್ಯಾಯಾಲಯ: ಮಹಿಳೆಯರ ಮೇಲೆ ಅತ್ಯಾಚಾರದಂಥ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆರೋಪಿಗಳಿಗೆ ಶೀಘ್ರ ಶಿಕ್ಷೆ ವಿಧಿಸಲು ಅನುಕೂಲವಾಗುವಂತೆ ರಾಜ್ಯದ 10 ಕಡೆಗಳಲ್ಲಿ ಶೀಘ್ರಗತಿ ನ್ಯಾಯಾಲಯ ಆರಂಭಿಸಲು ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ. ಇನ್ನು ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ, ಮಟ್ಕಾ, ಜೂಜಾಟ ಕುರಿತು ಜಾಗ್ರತೆವಹಿಸಲಾಗಿದೆ. ಚರ್ಚ್‌ಗಳ ಮೇಲೆ ದಾಳಿ ನಡೆಯದಂತೆ ಕ್ರಮವಹಿಸಲಾಗಿದೆ. ಏನಾದರೂ ತಪ್ಪು ನಡೆದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕೇ ಹೊರತು, ಕಾನೂನನ್ನು ಕೈಗೆ ತೆಗೆದುಕೊಂಡು ದುಷ್ಕೃತ್ಯ ನಡೆಸುವುದನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.