ಪ್ರಧಾನ ಸುದ್ದಿ

ಶಾದಿಭಾಗ್ಯ ಎಲ್ಲರಿಗೂ ವಿಸ್ತರಣೆ ಕೋರಿದ್ದ ಪಿಐಎಲ್ ವಜಾ

Published On :

ಬೆಂಗಳೂರು: ಅಲ್ಪಸಂಖ್ಯಾತ ಹೆಣ್ಣುಮಕ್ಕಳ ವಿವಾಹಕ್ಕೆ ಆರ್ಥಿಕ ನೆರವು ಒದಗಿಸುವ ಸರ್ಕಾರದ 'ಬಿದಾಯಿ'(ಶಾದಿ ಭಾಗ್ಯ)ಯೋಜನೆಯನ್ನು ಎಲ್ಲಾ ಸಮುದಾಯಗಳಿಗೂ ವಿಸ್ತರಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.  ಅರೈಸ್ ಇಂಡಿಯಾ ಫೌಂಡೇಷನ್‌ನ ಡಾ.ಕೋಡೂರು ವೆಂಕಟೇಶ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಮುಖ್ಯ ನ್ಯಾ.ಡಿ.ಎಚ್.ವಘೇಲ ಹಾಗೂ ನ್ಯಾ.ಎಸ್.ಎನ್.ಸತ್ಯನಾರಾಯಣ ಅವರಿದ್ದ ವಿಭಾಗೀಯ ಪೀಠ, ಅರ್ಜಿಯಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ ಎಂದು ಅಭಿಪ್ರಾಯಪಟ್ಟಿದೆ.  ಬಡ ಮುಸ್ಲಿಂ ಯುವತಿಯರ ವಿವಾಹ ಸಂದರ್ಭದಲ್ಲಿ ರು. 50 ಸಾವಿರ ಕೊಡುಗೆ ನೀಡುವ ಬಿದಾಯಿ ಯೋಜನೆಯನ್ನು ಸರ್ಕಾರ ಸೆ. 4ರಂದು ಜಾರಿಗೆ ತಂದಿತ್ತು. ಆದರೆ, ಇದಕ್ಕೆ ಇತರೆ ಸಮುದಾಯಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಯೋಜನೆಯನ್ನು ಇತರೆ ಅಲ್ಪಸಂಖ್ಯಾತ ಸಮುದಾಯಗಳಿಗೆ ಕೂಡ ವಿಸ್ತರಿಸಲಾಗಿತ್ತು.  ಆದರೆ, ಬಹುಸಂಖ್ಯಾತ ಸಮುದಾಯಗಳನ್ನು ಕೈಬಿಡಲಾಗಿದೆ. ಇದರಿಂದ ಸಂವಿಧಾನದ ಪರಿಚ್ಛೇದ 14ರ(ಸಮಾನತೆಯ ಹಕ್ಕು) ಉಲ್ಲಂಘನೆಯಾಗಿದೆ. ಈ ನಿಟ್ಟಿನಲ್ಲಿ ಯೋಜನೆಯನ್ನು ಸಮುದಾಯಗಳಿಗೂ  ವಿಸ್ತರಿಸಬೇಕು ಎಂದು ಕೋರಿ ಅರ್ಜಿಯಲ್ಲಿ ಕೋರಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.