ಪ್ರಧಾನ ಸುದ್ದಿ

ಆತ್ಮಹತ್ಯೆ ದಾರಿಗಿಳಿದ ಪ್ರತಿಭಟನೆ

Published On :

ಬೆಳಗಾವಿ: ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸುವವರು ವಿಷ ಸೇವನೆಯ ಬೆದರಿಕೆ ಹಾಕುತ್ತಿದ್ದಾರೆ.
ಮಂಗಳವಾರ ವಿವಿಧ ಸಂಘಟನೆಗಳ ಪ್ರತಿಭಟನೆ ಸಂದರ್ಭದಲ್ಲಿ ಪ್ರತಿಭಟನಾಕಾರನೊಬ್ಬ ವಿಷದ ಬಾಟಲಿಯೊಂದಿಗೆ ಬಂದಿದ್ದು, ಇನ್ನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ.
ಕಬ್ಬು ಬೆಳೆಗಾರ ವಿಠಲ ಅರಬಾವಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಬಳಿಕವೇ ರಾಜ್ಯ ಸರ್ಕಾರ ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಿದ್ದರಿಂದ ಆತ್ಮಹತ್ಯೆಗೆ ಯತ್ನಿಸಿದಲ್ಲಿ ಮಾತ್ರ ತಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸಬಹುದು, ಈಡೇರಿಸಬಹುದು ಎಂಬ ಭಾವನೆ ಬೆಳೆಯುತ್ತಿದೆ. ಮಂಗಳವಾರ ಆತ್ಮಹತ್ಯೆ ಬೆದರಿಕೆ ಹಾಕಿದ ಇಬ್ಬರೂ ಸುಶಿಕ್ಷಿತರು. ತಮ್ಮ ಬೇಡಿಕೆ ಈಡೇರಿಕೆಗಾಗಿ ಕಳೆದ ಎರಡು ದಿನದಿಂದ ಧರಣಿ ನಡೆಸುತ್ತಿರುವ ಆಯುಷ್ ವೈದ್ಯರ ಸಂಘಟನೆಯ ಹಾವೇರಿ ವೈದ್ಯ ಮೆನನ್ ಉದ್ರೇಕಕಾರಿ ಭಾಷಣ ಮಾಡಿದ್ದಲ್ಲದೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದರು. ಅದೇ ಸ್ಥಳದಲ್ಲಿ ಪ್ರತಿಭಟನಾ ನಿರತರಾಗಿರುವ ಖಾನಾಪುರ ತಾಲೂಕಿನ ಶಿಕ್ಷಕ ತುಕಾರಾಮ್ ಭಂಡಾರಿ ವಿಷದ ಬಾಟಲಿಯೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇಬ್ಬರನ್ನೂ ಪೊಲೀಸ್‌ರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಎರಡೂ ಪ್ರತ್ಯೇಕ ಘಟನೆಗಳಿಂದ ವಿಚಲಿತರಾದ ಪ್ರತಿಭಟನೆಯ ಸಂಘಟಕರು, ಪ್ರತಿಭಟನಾಕಾರರ ಬಳಿ ವಿಷದ ಬಾಟಲಿ ಇದೆಯೇ ಎಂದು ತಪಾಸಣೆ ನಡೆಸಿದರು. ಕೆಲವು ಮುಖಂಡರು ಪದೇ ಪದೇ ಮೈಕ್‌ನಲ್ಲಿ, ಯಾರಾದರೂ ಅಡ್ಡದಾರಿ ಹಿಡಿಯುವ ಉದ್ದೇಶ ಹೊಂದಿದ್ದರೆ ಅಥವಾ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುವ ಉದ್ದೇಶ ಹೊಂದಿದ್ದರೆ ಕೂಡಲೆ ಪ್ರತಿಭಟನಾ ವೇದಿಕೆ ಬಿಟ್ಟು ಹೋಗುವಂತೆ ಮನವಿ ಮಾಡಿಕೊಂಡರು.

- ಶ್ರೀಧರ ಕೋಟಾರಗಸ್ತಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.