ಪ್ರಧಾನ ಸುದ್ದಿ

ಕಾನೂನು ರಚನೆಗೆ ಸರ್ಕಾರ ಸಿದ್ಧತೆ

Published On :

ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಗಂಭೀರ ಸಮಸ್ಯೆಯಾಗಿ ಪರಿಣಮಿಸಿರುವ ಕಲಬೆರಕೆ ಹಾಲು ನಿಯಂತ್ರಣಕ್ಕೆ ಪ್ರತ್ಯೇಕ ಕಾನೂನು ರಚಿಸುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
ಈ ಸಂಬಂಧ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಮತ್ತು ಆರೋಗ್ಯ ಇಲಾಖೆ ಸಚಿವರು ಹಾಗೂ ಅಧಿಕಾರಿಗಳ ಜಂಟಿ ಸಭೆ ಗುರುವಾರ ಬೆಂಗಳೂರಿನಲ್ಲಿ ನಡೆಯಲಿದೆ.
ಉತ್ತರ ಕರ್ನಾಟಕ ಹಾಗೂ ಗಡಿ ಜಿಲ್ಲೆಗಳಲ್ಲಿ ಹಾಲಿಗೆ ಯೂರಿಯಾವನ್ನು ಬೆರಸಲಾಗುತ್ತಿದೆ. ಇದು ಮನುಷ್ಯರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಕೆಲ ಸದಸ್ಯರು ಆತಂಕ ವ್ಯಕ್ತಪಡಿಸಿದ್ದಾರೆ. ಇದರ ಜತೆಗೆ ಕಲಬೆರಕೆ ಹಾಲು ದಂಧೆ ನಿಯಂತ್ರಿಸಲು ಕಾನೂನು ಜಾರಿಗೆ ತರುವಂತೆ ಸುಪ್ರೀಂ ಕೋರ್ಟ್ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಾನೂನು ಜಾರಿಗೆ ತರಲು ಮುಂದಾಗಿದೆ. ಈ ಬಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಗುರುವಾರ ಆರೋಗ್ಯ ಸಚಿವರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಯಲಿದೆ. ಆದಷ್ಟು ಶೀಘ್ರ ಕಾನೂನು ರಚಿಸಲಾಗುವುದು ಎಂದು ಸೋಮವಾರ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.