ಕೈ ಬಿಡದ ಮಿಜೋರಾಂ
ಐಜ್ವಾಲ್: ನಾಲ್ಕು ರಾಜ್ಯಗಳಲ್ಲಿ ಸೋಲು ಕಂಡಿರುವ ಕಾಂಗ್ರೆಸ್‌ಗೆ ಮಿಜೋರಾಂ ಫಲಿತಾಂಶ ಸ್ವಲ್ಪಮಟ್ಟಿಗಿನ ನಿರಾಳತೆ ಒದಗಿಸಿದೆ. ಅಲ್ಲಿ ಕಾಂಗ್ರೆಸ್ ನಿಚ್ಚಳ ಬಹುಮತ ಪಡೆದಿದ್ದು ಸತತ 2ನೇ ಅವಧಿಗೆ ಅಧಿಕಾರದ ಗದ್ದುಗೆಗೇರುವ ಸಿದ್ಧತೆಯಲ್ಲಿದೆ. 40 ವಿಧಾನಸಭೆ ಸೀಟುಗಳಿಗೆ ನಡೆದ ಚುನಾವಣೆಯ ಫಲಿತಾಂಶ ಸೋಮವಾರ ಘೋಷಣೆಯಾಗಿದೆ. ಕಾಂಗ್ರೆಸ್ ಮೂರನೇ ಎರಡರಷ್ಟು ಬಹುಮತ ಸಾಧಿಸಿದ್ದು, 33 ಸೀಟುಗಳನ್ನು ತನ್ನ ತೆಕ್ಕೆಗೆ ಪಡೆಯುವಲ್ಲಿ ಯಶಸ್ವಿಯಾಗಿದೆ.
ಪ್ರತಿಪಕ್ಷಗಳ ಮೈತ್ರಿಕೂಟವಾದ ಮಿಜೋರಾಂ ಡೆಮಾಕ್ರಟಿಕ್ ಅಲಯನ್ಸ್ (ಎಂಡಿಎ) ಕೇವಲ 7 ಸ್ಥಾನಗಳಿಗಷ್ಟೇ ತೃಪ್ತಿಪಟ್ಟುಕೊಂಡಿದೆ.
ಇದೇ ವೇಳೆ, ಎಂಡಿಎ ಮೈತ್ರಿಕೂಟದ ಅಂಗಪಕ್ಷಗಳಾದ ಎಂಪಿಸಿ ಮತ್ತು ಮಾರಾಲ್ಯಾಂಡ್ ಡೆಮಾಕ್ರಟಿಕ್ ಫ್ರಂಟ್ ಖಾತೆ ತೆರೆಯುವಲ್ಲಿ ವಿಫಲವಾಗಿವೆ. 4 ಅವಧಿಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿರುವ ಲಾಲ್ ಥನ್‌ಹವ್ಲಾ ಅವರು ಮತ್ತೊಮ್ಮೆ ಮಿಜೋರಾಂ ಸಿಎಂ ಆಗಿ ಅಧಿಕಾರ ವಹಿಸಲಿದ್ದಾರೆ. ಥನ್‌ಹವ್ಲಾ ಕಣಕ್ಕಿಳಿದಿದ್ದ ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಜಯಗಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

