ವಕೀಲನಿಂದಲೇ ಕಿರಿಯ ವಕೀಲೆ ಮೇಲೆ ರೇಪ್
ಕನ್ನಡಪ್ರಭ ವಾರ್ತೆ ಮೈಸೂರು ಡಿ.14
ಮೈಸೂರಿನ ವಿಜಯನಗರ ಠಾಣೆಯಲ್ಲಿ ದೂರು ದಾಖಲು
ಮದುವೆಯಾಗುತ್ತೇನೆಂದು ನಂಬಿಸಿ, ವಂಚಿಸಿದ ಹಿರಿಯ ವಕೀಲ
ಹಿರಿಯ ವಕೀಲರೊಬ್ಬರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ, ಕಿರಿಯ ವಕೀಲೆಯೊಬ್ಬರು ಪೊಲೀಸರಿಗೆ ದೂರು ನೀಡಿರುವ ಘಟನೆ ನಗರದಲ್ಲಿ ಶನಿವಾರ ನಡೆದಿದೆ.
ಮದುವೆಯಾಗುತ್ತೇನೆಂದು ನಂಬಿಸಿ ನನ್ನನ್ನು ದೈಹಿಕವಾಗಿ ಬಳಸಿಕೊಂಡು, ಮದುವೆಯಾಗದೆ ವಂಚಿಸಿದ್ದಾರೆ. ಈ ವಿಚಾರ ತಿಳಿದ ವಕೀಲನ ತಂದೆ ಮಧ್ಯಪ್ರವೇಶಿಸಿ, ಪೊಲೀಸರಿಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಕಿರಿಯ ವಕೀಲೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಈ ಕಿರಿಯ ವಕೀಲೆ ತಾನು ಆರೋಪಿಸಿರುವ ಹಿರಿಯ ವಕೀಲರ ಕಚೇರಿಯಲ್ಲಿ ಜೂನಿಯರ್ ಆಗಿ ಪ್ರಾಕ್ಟೀಸ್ ಮಾಡುತ್ತಿದ್ದರು. ಈ ಸಂಬಂಧ ವಿಜಯನಗರ ಠಾಣೆ ಪೊಲೀಸರು ಅತ್ಯಾಚಾರ, ವಂಚನೆ ಮತ್ತು ಕೊಲೆ ಬೆದರಿಕೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ತನಿಖೆ ಆರಂಭ- ಪೊಲೀಸ್ ಆಯುಕ್ತ: ಹಿರಿಯ ವಕೀಲ ನ.16 ರಂದು ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಕಿರಿಯ ವಕೀಲೆಯೊಬ್ಬರು ದೂರು ದಾಖಲಿಸಿದ್ದಾರೆ. ಈ ಸಂಬಂಧ ತನಿಖೆ ಆರಂಭಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ತಿಳಿಸಿದ್ದಾರೆ.
ಪಿಎಚ್ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರೊಫೆಸರ್ ಸೆರೆ
ಗುಲ್ಬರ್ಗ: ಪಿಎಚ್ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹೊತ್ತು ಕಳೆದೊಂದು ವಾರದಿಂದ ತಲೆಮರೆಸಿಕೊಂಡಿದ್ದ ಗುಲ್ಬರ್ಗ ವಿಶ್ವವಿದ್ಯಾಲಯ ಅರ್ಥಶಾಸ್ತ್ರ ವಿಭಾಗದ ಪ್ರೊಫೆಸರ್ ಡಾ. ದಶರಥ ನಾಯಕ ಕೊನೆಗೂ ಪೊಲೀಸರ ಅತಿಥಿಯಾಗಿದ್ದಾರೆ. ಗುಲ್ಬರ್ಗ ವಿವಿ ಕುಲಪತಿ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದ ಡಾ. ದಶರಥ ನಾಯಕ ತಾಂಡಾಗಳಲ್ಲಿ ತಲೆಮರೆಸಿಕೊಂಡಿದ್ದರು. ಪ್ರಕರಣದ ತನಿಖೆ ಹೊಣೆ ಹೊತ್ತಿದ್ದ ಎಎಸ್ಪಿ, ಗುಲ್ಬರ್ಗ ಗ್ರಾಮೀಣ ಡಿಎಸ್ಪಿ ಸಂತೋಷ ಬಾಬು ನೇತೃತ್ವದಲ್ಲಿ 3 ತಂಡಗಳನ್ನು ರಚಿಸಿ ನಾಯಕ ಬಂಧನಕ್ಕೆ ಜಾಲ ಬೀಸಲಾಗಿತ್ತು. ನಾಯಕ ಅವರ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದ ಪೊಲೀಸರು ಕೊನೆಗೂ ಅವರನ್ನು ನಾಂದೇಡ್ ಬಳಿಯ ಹಿಂಗೊಳ್ಳಿ ತಾಂಡಾದಲ್ಲಿ ಶನಿವಾರ ಬೆಳಗ್ಗೆ ಬಂಧಿಸಿದ್ದಾರೆ. ಗುಲ್ಬರ್ಗದಿಂದ 500 ಕಿ.ಮೀ. ದೂರದಲ್ಲಿದೆ ಹಿಂಗೊಳ್ಳಿ ತಾಂಡಾ. ಅಲ್ಲಿಂದ ಡಾ. ನಾಯಕರನ್ನು ಗುಲ್ಬರ್ಗಕ್ಕೆ ಕರೆತರಲಾಗುತ್ತಿದೆ. ಭಾನುವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಪ್ರಕರಣದ ವಿಚಾರಾಣಾಧಿಕಾರಿ ಸಂತೋಷ ಬಾಬು 'ಕನ್ನಡಪ್ರಭ'ಕ್ಕೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

