ಇಂದಿನಿಂದ ನುಡಿಸಿರಿ ವಿರಾಸತ್ ವೈಭವ
ಮೂಡುಬಿದರೆ: ಕನ್ನಡ ಮನಸ್ಸು ಅಂದು, ಇಂದು ಮುಂದು ಧ್ಯೇಯವಾಕ್ಯದಡಿ ಇಲ್ಲಿನ ವಿದ್ಯಾಗಿರಿಯಲ್ಲಿ ಡಿ.19ರಿಂದ 22ರವರೆಗೆ ಆಳ್ವಾಸ್ ವಿಶ್ವನುಡಿಸಿರಿ ವಿರಾಸತ್ ನಡೆಯಲಿದೆ.
ಡಾ.ಬಿ.ಎ. ವಿವೇಕ್ ರೈ ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದು, ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಮ್ಮೇಳನ ಉದ್ಘಾಟಿಸುವರು. ಡಿ.19ರಂದು ಮಧ್ಯಾಹ್ನ 3 ಗಂಟೆಗೆ ಮೆರವಣಿಗೆ ಅರಂಭವಾಗಲಿದ್ದು, ಸಂಜೆ 6 ಗಂಟೆಗೆ ಸಮ್ಮೇಳನ ಉದ್ಘಾಟನೆಗೊಳ್ಳಲಿದೆ. 100 ಎಕರೆ ಜಾಗದಲ್ಲಿ 9 ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ವಿದ್ಯಾರ್ಥಿಸಿರಿ, ಜಾನಪದ ಸಿರಿ, ಕೃಷಿ ಮೇಳ ಪ್ರತ್ಯೇಕ ವೇದಿಕೆಗಳಲ್ಲಿ ಸಮನಾಂತರವಾಗಿ ನಡೆಯಲಿದೆ. ಡಿ.20ರಂದು ಸಂಜೆ ಆಳ್ವಾಸ್ ವಿರಾಸತ್ ಕಾರ್ಯಕ್ರಮವನ್ನು ಕನ್ನಡ ಸಂಸ್ಕೃತಿ ಸಚಿವೆ ಉಮಾಶ್ರೀ ಉದ್ಘಾಟಿಸುವರು. ಕೇಂದ್ರ ಇಂಧನ ಸಚಿವ ವೀರಪ್ಪ ಮೊಯ್ಲಿ ಸಮಾರೋಪ ಭಾಷಣ ಮಾಡುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

