ವಿಷಾದ ಬೇಡ, ಕ್ಷಮೆ ಬೇಕು

ನವದೆಹಲಿ/ವಾಷಿಂಗ್ಟನ್: ಭಾರತೀಯ ರಾಜತಾಂತ್ರಿಕ ಅಧಿಕಾರಿ ದೇವಯಾನಿ ಜತೆಗಿನ ಅಮಾನವೀಯ ವರ್ತನೆಗೆ ಅಮೆರಿಕ ವಿಷಾದ ವ್ಯಕ್ತಪಡಿಸಿದ್ದು, ಇದನ್ನು ಭಾರತ ತಿರಸ್ಕರಿಸಿದೆ. ವಿಷಾದ ವ್ಯಕ್ತಪಡಿಸಿದರೆ ಸಾಲದು ಅಮೆರಿಕ ತನ್ನ ತಪ್ಪಿಗಾಗಿ ಕ್ಷಮೆ ಕೋರಬೇಕು ಎಂದು ಪಟ್ಟುಹಿಡಿದಿದೆ. ಜತೆಗೆ, ದೇವಯಾನಿ ವಿರುದ್ಧ ದಾಖಲಿಸಲಾಗಿರುವ ಎಲ್ಲ ಪ್ರಕರಣಗಳನ್ನು ಹಿಂಪಡೆಯುವಂತೆಯೂ ಭಾರತ ಒತ್ತಾಯಿಸಿದೆ.
ಘಟನೆಯಿಂದಾಗಿ ಹೆಚ್ಚುತ್ತಿರುವ ಆಕ್ರೋಶದ ಹಿನ್ನೆಲೆಯಲ್ಲಿ ಅಮೆರಿಕದ ವಿದೇಶಾಂಗ ಸಚಿವ ಜಾನ್ ಕೆರ್ರಿ ಅವರು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವಶಂಕರ್ ಮೆನನ್ ಅವರಿಗೆ ಕರೆ ಮಾಡಿ ಘಟನೆ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ. ಜತೆಗೆ, ಈ ವಿಚಾರ ಎರಡೂ ದೇಶಗಳ ಆತ್ಮೀಯ ಸಂಬಂಧದ ಮೇಲೆ ಪರಿಣಾಮ ಬೀರುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ.
ಆದರೆ, ಅಮೆರಿಕ ತನ್ನ ತಪ್ಪನ್ನು ಒಪ್ಪಿಕೊಂಡು ಕ್ಷಮೆಕೋರಿದರಷ್ಟೆ ನಮಗೆ ತೃಪ್ತಿಯಾಗಲು ಸಾಧ್ಯ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಮಲ್ನಾಥ್ ಸ್ಪಷ್ಟವಾಗಿ ತಿಳಿಸಿದ್ದಾರೆ. ಈ ನಡುವೆ, ದೇವಯಾನಿ ಪ್ರಕರಣದಲ್ಲಿ ಅಮೆರಿಕದ ಕ್ರಮವನ್ನು ಸಮರ್ಥಿಸಿಕೊಂಡಿರುವ ಭಾರತೀಯ ಮೂಲದ ಅಮೆರಿಕನ್ ಪ್ರಾಸಿಕ್ಯೂಟರ್ ಪ್ರೀತ್ ಭರಾರಾ ಕ್ರಮಕ್ಕೂ ವಿದೇಶಾಂಗ ಸಚಿವಾಲಯ ಖಾರವಾದ ಉತ್ತರ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


